Saturday, December 6, 2025
Saturday, December 6, 2025

State Government ಮಗ್ಗಗಳಿಗೆ 250 ಯೂನಿಟ್ ಉಚಿತ ವಿದ್ಯುತ್- ದೀಪಾವಳಿ ಕೊಡುಗೆ- ಸಚಿವ ಶಿವಾನಂದ ಪಾಟೀಲ್

Date:

State Government ಮಗ್ಗಗಳಿಗೆ 250 ಯುನಿಟ್‌ವರೆಗೂ ಉಚಿತ ವಿದ್ಯುತ್‌ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 10 ಹೆಚ್ಪಿವರೆಗಿನ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ತಿಂಗಳಿಗೆ ಗರಿಷ್ಠ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಜವಳಿ ಸಚಿವ ಶಿವಾನಂದ ಪಾಟೀಲ್ ಅವರು ಮಗ್ಗ ಕೆಲಸಗಾರರಿಗೆ ಉಚಿತ ವಿದ್ಯುತ್ ನೀಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದರಿಂದ ನೇಕಾರರಿಗೆ ದೊಡ್ಡ ಮಟ್ಟದಲ್ಲಿ ಅನುಕೂಲವಾಗಲಿದೆ ಎಂದಿದ್ದಾರೆ.

ಚುನಾವಣೆ ವೇಳೆ ಈ ಕುರಿತಂತೆ ಕಾಂಗ್ರೆಸ್ ಘೋಷಣೆ ಮಾಡಿತ್ತು. ಅದನ್ನೇ ನಮ್ಮ ಸರ್ಕಾರ ಕಾರ್ಯರೂಪಕ್ಕೆ ತಂದಿದೆ. ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಲು ಸರ್ಕಾರ ಕ್ರಮಕೈಗೊಂಡಿದೆ ಎಂದಿದ್ದಾರೆ.

State government ಈ ಮೂಲಕ ಆರ್ಥಿಕ ಸಂಕಷ್ಟದಲ್ಲಿರುವ ನೇಕಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ದಸರಾ, ದೀಪಾವಳಿ ಕೊಡುಗೆಯಾಗಿ ಉಚಿತ ವಿದ್ಯುತ್‌ ನೀಡಲು ಮುಂದಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...