Sunday, October 11, 2026
Sunday, October 11, 2026

Grilahakshmi Yojana ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯಾದವರು ಹೀಗೆ ಮಾಡಿ ಹಣ ಬರುತ್ತದೆ

Date:

Grilahakshmi Yojana ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ ರೂ.2000/- ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.

ಸೆಪ್ಟೆಂಬರ್ ಮಾಹೆಯಲ್ಲಿ 3,45,386 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ರೂ.2000/- ಹಣ ಜಮೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ 31,512 ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್‍ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್‍ಗಳಿಗೆ ಸಂಪರ್ಕಿಸಬೇಕು.

ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್‍ಡೇಟ್ ಮಾಡಿಸಿಕೊಳ್ಳುವುದು ಹಾಗೂ ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್‍ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

Grilahakshmi Yojana ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...