Sunday, May 17, 2026
Sunday, May 17, 2026

Karnataka Rajyotsava ನ.1ರಂದು ಶಿವಮೊಗ್ಗದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ

Date:

Karnataka Rajyotsava ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನವೆಂಬರ್ 1 ರ ಬೆಳಿಗ್ಗೆ 9 ಗಂಟೆಗೆ ನಗರದ ಡಿ.ಎ.ಆರ್. ಪೊಲೀಸ್ ಪೆರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಧ್ವಜಾರೋಹಣವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ನೆರವೇರಿಸುವರು. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಿ. ಸುಧಾಕರ್ ಇವರ ಗೌರವಾನ್ವಿತ ಉಪಸ್ಥಿತಿ ಇರಲಿದೆ.

ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಅಧಿಕಾರಿಗಳು, ಪಾಲ್ಗೊಳ್ಳುವರು.

Karnataka Rajyotsava ಬೆಳಿಗ್ಗೆ 8 ಗಂಟೆಗೆ ನಗರದ ಸೈನ್ಸ್ ಕಾಲೇಜು ಮೈದಾನದಿಂದ ಡಿ.ಎ.ಆರ್ ಪೊಲೀಸ್ ಪೆರೇಡ್ ಮೈದಾನದವರೆಗೆ ಶ್ರೀ ಭುವನೇಶ್ವರಿ ದೇವಿ ಮೆರವಣಿಗೆ ಬರಲಿದೆ. ಸಂಜೆ 5ಗಂಟೆಗೆ ಕುವೆಂಪು ರಂಗಮ0ದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...