Friday, November 22, 2024
Friday, November 22, 2024

Athletics Games ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬುವ ಸಾಧನ : ಬೈರೇಗೌಡ

Date:

Athletics Games ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಶಾರೀರಿಕವಾಗಿ ಗಟ್ಟಿಗೊಳಿಸುವ ಜೊತೆಗೆ ಮಾನಸಿಕವಾಗಿ ಆತ್ಮಸ್ಥೈರ್ಯ ವನ್ನು ತುಂಬುವ ಸಾಧನ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬೈರೇಗೌಡ ಹೇಳಿದರು.

ಚಿಕ್ಕಮಗಳೂರು ನಗರದ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಸಂಘದ ಸಂಯುಕ್ರಾಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯವಾಗಿದ್ದು, ಸೂಕ್ತ ತರಬೇತಿ ಪಡೆದರೆ ರಾಷ್ಟç ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಲು ಸಾಧ್ಯವಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಕ್ರೀಡಾಚಟುವಟಿಕೆಯಲ್ಲಿ ನಿರಂತರ ಶ್ರಮ ಅಗತ್ಯ ಎಂದು ಸಲಹೆ ನೀಡಿದರು.

ಕ್ರೀಡಾಸಕ್ತಿಯಲ್ಲಿ ಅತ್ಯಂತ ಶ್ರಮವಹಿಸಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಹೊಣೆ ತೀರ್ಪುಗಾರರ ಮೇಲಿದ್ದು ಉತ್ತಮ ಕ್ರೀಡಾಚಟುವಟಿಕೆಯಲ್ಲಿ ತೊಡಗುವ ಮಕ್ಕಳಿಗೆ ಆಯ್ಕೆಗೊಳಿಸಿ ರಾಜ್ಯಮಟ್ಟಕ್ಕೆ ಕಳುಹಿಸುವ ಮಹತ್ತರ ಜವಾಬ್ದಾರಿಯನ್ನು ತೀರ್ಪುಗಾರರು ನಿಭಾಯಿಸಬೇಕು ಎಂದು ಹೇಳಿದರು.

ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಗಮಿಸಿರುವ ವಿದ್ಯಾರ್ಥಿಗಳು ಹೆಚ್ಚಿನ ಶ್ರಮವಹಿಸಿ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವಂತಾಗಬೇಕು. ಅದಲ್ಲದೇ ಜಿಲ್ಲೆಯ ಕೀರ್ತಿಯನ್ನು ದೇಶಾದ್ಯಂತ ಪರಸರಿಸುವ ಗುರಿ ಹೊಂದಬೇಕು ಎಂದು ಕಿವಿಮಾತು ಹೇಳಿದರು.

Athletics Games ರಾಜ್ಯ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಫೈರೋಝ್ ಅಹಮ್ಮದ್ ಮಾತನಾಡಿ ಕಳೆದ ಒಂದೂವರೆ ತಿಂಗಳಿನಿoದ ದೈಹಿಕ ಶಿಕ್ಷಕರು ತರಬೇತಿ ನೀಡಿ ಅತ್ಯಂತ ಶ್ರಮವಹಿಸಿದ್ದಾರೆ.

ಕಡಿಮೆ ಕಾಲಾವಧಿಯಲ್ಲಿ ದೊಡ್ಡಮಟ್ಟದಲ್ಲಿ ಕ್ರೀಡಾಚಟುವಟಿಕೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಜಿಲ್ಲಾಮಟ್ಟದ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಮುಂದಿನ ನವೆಂಬರ್ 1 ರಿಂದ 3ರವರೆಗೆ ಉಡುಪಿಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸಬಹುದಾಗಿದ್ದು ನ.1 ರಿಂದ ನೋಂದಣಿ ಕಾರ್ಯವು ನಡೆಯಲಿದ್ದು ನ.2ಮತ್ತು 3 ರಂದು ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ರಂಗನಾಥ ಶಿಕ್ಷಣ, ಕ್ರೀಡೆ ಸೇರಿ ಇತರೆ ಚಟುವಟಿಕೆಗಳಲ್ಲಿ ರಾಷ್ಟçಮಟ್ಟದವರೆಗೂ ಸಾಧನೆ ಮಾಡುವ ಮೂಲಕ ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿ ತರಲು ವಿದ್ಯಾರ್ಥಿಗಳು ಮುಂದಾಗಬೇಕು. ಅದಕ್ಕಾಗಿ ಆಸಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ಜಿಲ್ಲೆಯ ಒಟ್ಟು ಎಂಟು ಶೈಕ್ಷಣಿಯ ವಲಯಗಳಿಂದ 20ಕ್ಕೂ ಹೆಚ್ಚು ಪ್ರಾಥಮಿಕ ವಿಭಾಗದ ಶಾಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್, ಶಿಕ್ಷಣಾಧಿಕಾರಿ ಎಸ್.ಆರ್.ಮಂಜುನಾಥ್, ಜಿ.ಪಂ. ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಸುಂದರೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿಲ್ಲಾಧ್ಯಕ್ಷ ದೇವೇಂ ದ್ರ, ಪ್ರಾಥಮಿಕ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎನ್.ಟಿ.ಚಂದ್ರಯ್ಯ, ತಾಲ್ಲೂಕು ಅಧ್ಯಕ್ಷ ಬಿ.ಆರ್.ಕಿರಣ್‌ಕು ಮಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪಿ.ಕುಮಾರಸ್ವಾಮಿ, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಶಿವಪ್ಪ, ಕಾರ್ಯದರ್ಶಿ ಪಾಂಡುರ0ಗ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪರಮೇಶ್ವರಪ್ಪ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...