Thursday, June 11, 2026
Thursday, June 11, 2026

Awareness Educational Loan Scheme ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

Date:

Awareness Educational Loan Scheme ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2022-23ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 1 ಲಕ್ಷಗಳ ಸಾಲ ಹಾಗೂ ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ಇದ್ದು, ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸುವುದು. ಅರ್ಜಿದಾರರು 18ರಿಂದ 35 ವರ್ಷದೊಳಗಿನವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6 ಲಕ್ಷಗಳ ಮಿತಿಯೊಳಗಿರಬೇಕು.

ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ www.kacdc.karnataka.gov.in ರ ಮೂಲಕ ನವೆಂಬರ್ ೩೦ ರೊಳಗಾಗಿ ಅರ್ಜಿ ಸಲ್ಲಿಸುವುದು. ಈ ಯೋಜನೆಯ ಮಾರ್ಗಸೂಚಿ ಹಾಗೂ ಅರ್ಜಿಯನ್ನು ಗೂಗಲ್‌ನಲ್ಲಿ ಕ್ಯೂಆರ್ ಕೋಡ್‌ನ್ನು ಸ್ಕ್ಯಾನ್ ಮಾಡಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Awareness Educational Loan Scheme ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 9448481111 / 08182-229634 ಅಥವಾ www.kacdc.karnataka.gov.in ವೆಬ್‌ಸೈಟ್ ಅಥವಾ ಜಿಲ್ಲಾ ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಕಚೇರಿ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಾಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಇಲ್ಲಿ ಸಂಪರ್ಕಿಸಿ ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Vaccination Day ಜೂನ್ 28, ಭಾನುವಾರ “ರಾಷ್ಟ್ರೀಯ ಲಸಿಕಾ ದಿನ”-ರಿತ್ವಿಕ್ ಪಾಂಡೆ

National Vaccination Day ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ...

B.Y. Raghavendra ಸಂಸದ ರಾಘವೇಂದ್ರರಿಂದ ಮಾಚೇನಹಳ್ಳಿ ಕೈಗಾರಿಕಾ ಘಟಕಗಳಿಗೆ ಭೇಟಿ

B.Y. Raghavendra ಶಿವಮೊಗ್ಗದ ಕೈಗಾರಿಕಾ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿರುವ...

S.N. Channabasappa ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ, ಸಂಚಾರ ಸುಗಮ ಅವಕಾಶಕ್ಕೆ ಆದ್ಯತೆ- ಶಾಸಕ ಚೆನ್ನಿ

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ...