Saturday, June 21, 2025
Saturday, June 21, 2025

Ministry of Youth Affairs and Sports ರಾಷ್ಟ್ರಮಟ್ಟದ ಅಮೃತ ಕಳಶ ಅಭಿಯಾನದ ವಿಶೇಷ ತಂಡಕ್ಕೆ ಬೀಳ್ಕೊಡುಗೆ

Date:

Ministry of Youth Affairs and Sports ಭಾರತ ಸರ್ಕಾರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದ ವತಿಯಿಂದ ಪ್ರತಿಷ್ಠಿತ ಅಭಿಯಾನವಾದ ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆಯು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಅದ್ದೂರಿಯಾಗಿ/ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು. ಜಿಲ್ಲೆಯ 7 ತಾಲ್ಲೂಕಿನಿಂದ ಸಂಗ್ರಹಿಸಿರುವ ಮಣ್ಣಿನ ಅಮೃತ ಕಳಶಕ್ಕೆ ನೆಹರು ಯುವ ಕೇಂದ್ರದಲ್ಲಿ ಪೂಜೆ ಸಲ್ಲಿಸಿ, 26.10.2023 ರಂದು ದೆಹಲಿಗೆ ಕೊಂಡೊಯ್ಯುವ ಯುವಕಾರ್ಯಕರ್ತರ ತಂಡಕ್ಕೆ ಶುಭ ಹಾರೈಸಿ ರಾಷ್ಟ್ರ ಮಟ್ಟದ ಅಮೃತ ಕಳಶ ಯಾತ್ರೆಗೆ ಬೀಳ್ಕೊಡಲಾಯಿತು.

ಶಿವಮೊಗ್ಗ ಜಿಲ್ಲೆಯಿಂದ ಹೊರಟ ತಂಡವು ಬೆಂಗಳೂರಿಗೆ ತೆರಳಿ ,27.10.2023ರಂದು ನಡೆಯುವ ರಾಜ್ಯ ಮಟ್ಟದ ಅಮೃತಕಳಶ ಯಾತ್ರೆಯಲ್ಲಿ ಪಾಲ್ಗೊಂಡು,ನಂತರ ಮಧ್ಯಾಹ್ನ ವಿಶೇಷ ರೈಲಿನ ಮೂಲಕ ನವದೆಹಲಿಗೆ ತೆರಳಲಿದ್ದಾರೆ.

ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ರವರು ಬೀಳ್ಕೊಡುಗೆಯ ಸಂಧರ್ಭದಲ್ಲಿ ಕಾರ್ಯಕ್ರಮ ಕುರಿತಾಗಿ ಮಾತನಾಡಿ, ಜಿಲ್ಲೆಯ ಯುವಕರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ,ಈ ಕಾರ್ಯಕ್ರಮದಲ್ಲಿ ಯುವಕ/ಯುವತಿಯರು ಭಾಗವಹಿಸುತ್ತಿರುವುದು ಜಿಲ್ಲೆಯ ಯುವಜನರಿಗೆ ಆದರ್ಶವಾಗಿದೆ. ನಮ್ಮ ಜಿಲ್ಲೆಯಿಂದ ಒಟ್ಟು 34 ಯುವಕ /ಯುವತಿಯರು ತೆರಳುತ್ತಿದ್ದು ಅಕ್ಟೋಬರ್ 30,31 ರಂದು ದೆಹಲಿಯ ಕರ್ತವ್ಯ ಪಥ್‍ನಲ್ಲಿ ನಡೆಯಲಿರುವ ಬೃಹತ್ ಅಮೃತ ಕಳಶದ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

ಈ ಅಮೃತ ಕಳಶದ ಮಣ್ಣಿನಲ್ಲಿ ಅಮೃತ ವಾಟಿಕಾ(ಉದ್ಯಾನವನ) ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ಸ್ಮಾರಕವನ್ನು ಮಾಡಲಿದ್ದಾರೆ ಎಂದು ತಿಳಿಸಿದರು.

Ministry of Youth Affairs and Sports ಈ ವೇಳೆ ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್, ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ , ಭದ್ರಾವತಿ ಪಟ್ಟಣ ಪಂಚಾಯತ್‍ನ ಸತೀಶ್, ನೆ.ಯು.ಕೇಂದ್ರದ ಲೆಕ್ಕಾಧಿಕಾರಿ ರಮೇಶ್, ರಾಷ್ಟ್ರೀಯ ಯುವ ಕಾರ್ಯಕರ್ತರು, ಇತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...