Thursday, March 19, 2026
Thursday, March 19, 2026

City Corporation Shivamogga ಬಡವರು, ಮಧ್ಯಮ ವರ್ಗದವರಿಗೆ ಸೂಡಾದಿಂದ ನಿವೇಶನ ಬಡಾವಣೆ ಸಿದ್ಧಪಡಿಸಿ- ಸಚಿವ ಸುರೇಶ್

Date:

City Corporation Shivamogga ಬಡವರು, ಮಧ್ಯಮವರ್ಗದವರಿಗೆ ಸೂಡಾದಿಂದ ಸರ್ಕಾರಿ ಲೇಔಟ್‍ಗಳನ್ನು ಸಿದ್ದಪಡಿಸಿ ನೀಡಬೇಕೆಂದು ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವರಾದ ಬಿ ಎಸ್ ಸುರೇಶ ಸೂಡಾ ಆಯುಕ್ತರಿಗೆ ತಿಳಿಸಿದರು.

ನಗರಾಭಿವೃದಿ ಪ್ರಾಧಿಕಾರ, ಮಹಾನಗರಪಾಲಿಕೆ, ಕೆಯುಐಡಿಎಫ್‍ಸಿ, ಕನನೀಸ&ಒಚ ಮತ್ತು ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಜಿಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಸಿ ಅವರು ಮಾತನಾಡಿದರು.

ಜನಸಾಮಾನ್ಯರಿಗೆ ಅವರ ಕೈಗೆಟುಕುವ ದರದಲ್ಲಿ ನಿವೇಶನ ಹಂಚಿಕೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಕೇವಲ ಖಾಸಗಿಯವರಿಗೆ ಅನುಮತಿ ನೀಡುವುದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಕೆಲಸವಲ್ಲ. ಶೀಘ್ರದಲ್ಲಿ ನಗರದಲ್ಲಿ ಸ್ಥಳ ಹುಡುಕಿ 250 ರಿಂದ 500 ಎಕರೆಯ ಸರ್ಕಾರಿ ಲೇಔಟ್ ಸಿದ್ದಪಡಿಸಿ ಸಾರ್ವಜನಿಕರಿಗೆ ನೀಡಬೇಕು. ಅಲ್ಲಿಯವರೆಗೆ ಖಾಸಗಿಯವರಿಗೆ ಅನುಮತಿ ನೀಡುವ ಹಾಗಿಲ್ಲ ಎಂದು ತಾಕೀತು ಮಾಡಿದರು.

ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಶಿವಮೊಗ್ಗದಲ್ಲಿ ಸರ್ಕಾರಿ ಲೇಔಟ್ ತುಂಬಾ ಕಡಿಮೆ ಇದೆ. ಸ್ಥಳೀಯ ಶಾಸಕರು, ಸಂಸದರು ಮತ್ತು ಡಿಸಿ ಯವರೊಂದಿಗೆ ಸೂಡಾ ಆಯುಕ್ತರು ಚರ್ಚಿಸಿ ಸ್ಥಳ ಗುರುತಿಸಿ ಲೇಔಟ್ ಅಭಿವೃದ್ದಿಪಡಿಸಬೇಕು ಹಾಗೂ ಸಿಡಿಪಿ ಯನ್ನು ಶೀಘ್ರದಲ್ಲಿ ಸಿದ್ದಪಡಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸೂಚಿಸಿದರು.

ಪ್ರಾಧಿಕಾರದಿಂದ ಸರ್ಕಾರಿ ಲೇಔಟ್‍ಗಳು, ರಸ್ತೆಗಳು, ಕೆರೆ ಅಭಿವೃದ್ದಿ ಸೇರಿದಂತೆ ಅಭಿವೃದ್ದಿ ಕೆಲಸಗಳು ಆಗಬೇಕು. ಡಿಪಿಆರ್ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಎಲ್ಲ ಕೆಲಸಗಳು ಪಾರದರ್ಶಕವಾಗಿ ನಡೆಯಬೇಕು ಎಂದರು.

ಶಾಸಕರಾದ ಎಸ್.ಎನ್.ಚನ್ನಬಸಪ್ಪ ನವರು ಆಶ್ರಯ ಯೋಜನೆಯಡಿ ಬಂದಿರುವ ಅರ್ಜಿದಾರರಿಗೆ ನಿವೇಶನ ಹಂಚಿಕೆ ಕುರಿತು ಪ್ರಸ್ತಾಪಿಸಿದರು. ಈ ಯೋಜನೆಯಡಿ ಬಂದಿರುವ ಸುಮಾರು 3 ಸಾವಿರ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸಚಿವರು ಸೂಚನೆ ನೀಡಿದರು.

ಪಾಲಿಕೆ ಆಯುಕ್ತರು ಮತ್ತು ಸ್ಮಾರ್ಟ್‍ಸಿಟಿ ಎಂಡಿ ಮಾಯಣ್ಣ ಗೌಡ ಮಾತನಾಡಿ, ಸ್ಮಾರ್ಟ್‍ಸಿಗೆ ಸಂಬಂಧಿಸಿದಂತೆ ರೂ.990 ಕೋಟಿ ಹಣ ಮಂಜೂರಾಗಿದ್ದು 71 ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಅದರಲ್ಲಿ 67 ಕಾಮಗಾರಿಗಳು ಪೂರ್ಣಗೊಂಡಿವೆ. ರೂ.920 ಕೋಟಿ ಪ್ರಗತಿಯಾಗಿದ್ದು ಶೇ.97 ಭೌತಿಕ ಮತ್ತು ಶೇ.92 ಆರ್ಥಿಕ ಪ್ರಗತಿಯಾಗಿದೆ. 4 ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಸಚಿವರು ನಗರದ ಸ್ಮಾರ್ಟ್‍ಸಿಟಿ ಯೋಜನೆಯ ಕುರಿತು ಅನೇಕ ದೂರುಗಳು ಬಂದಿವೆ. ಯುಜಿ ಕೇಬಲ್, ರಸ್ತೆ, ಚರಂಡಿ ಇತರೆ ಕಾಮಗಾರಿ ಬಗ್ಗೆ ಸಾಕಷ್ಟು ದೂರುಗಳಿದ್ದು, ಸಮಗ್ರವಾಗಿ ಈ ದೂರುಗಳ ಕುರಿತು ಪರಿಶೀಲನೆ ನಡೆಸಿ, ಈ ಲೋಪಗಳು ಸರಿಯಾದ ಮೇಲೆ ಬಾಕಿ ಹಣ ಪಾವತಿಸಬೇಕು. ಕಳಪೆ ಕಾಮಗಾರಿ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ 18 ಸಾವಿರ ಬೀದಿ ದೀಪ ಅಳವಡಿಕೆ ಆಗಿದೆ. ಶೇ.98 ಬೀದಿದೀಪಗಳು ಉರಿಯಬೇಕು. ಹೆಚ್ಚುವರಿ ಬೀದಿ ದೀಪಗಳನ್ನು ಅಳವಡಿಸಬೇಕು. ಸಮರ್ಪಕವಾಗಿ ನಿರ್ವಹಿಸಬೇಕು. ಹೆಚ್ಚುವರಿಗಯಾಗಿ ಅನುದಾನ ಬೇಕಾದಲ್ಲಿ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು.

ಕೆರೆಗಳು, ಪಾರ್ಕ್ ಅಭಿವೃದ್ದಿ ಸೇರಿದಂತೆ ಪಾಲಿಕೆಗೆ ರೂ.25 ಕೋಟಿ ಹಣವನ್ನು ಮಂಜೂರು ಮಾಡಿದ್ದು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು. ಯುಜಿಡಿ ಗೆ ರೂ.220 ಕೋಟಿ ಪ್ರಸ್ತಾವನೆ ಸಲ್ಲಿಸಿದ್ದು, ಹಣ ಮಂಜೂರು ಮಾಡಲಾಗುವುದು, ರಿಸ್ಟೋರೇಷನ್ ಕಾಮಗಾರಿಯನ್ನು ಸಹ ಸಮರ್ಪಕವಾಗಿ ಮಾಡಬೇಕೆಂದರು.

City Corporation Shivamogga ಪಾಲಿಕೆ, ನಗರಸಭೆ, ಪುರಸಭೆ, ಸ್ಥಳೀಯ ಸಂಸ್ಥೆಗಳಲ್ಲಿ ಕರ ವಸೂಲಾತಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು. ಹೊಸ ನಿಯಮದಂತೆ ನಿರ್ವಹಿಸಬೇಕು. ಇಲ್ಲವಾದಲ್ಲಿ ಶಿಸ್ತಿನ ಕ್ರಮ ವಹಿಸಲಾಗುವುದು. ಕುಡಿಯುವ ನೀರು, ಕಸ ನಿರ್ವಹಣೆ ಹಾಗೂ ಮುಖ್ಯವಾಗಿ ಎಲ್ಲಿಯೂ ನೀರು ಕಲುಷಿತವಾಗದಂತೆ ಕ್ರಮ ವಹಿಸಬೇಕೆಂದ ಅವರು. ಯುಜಿಡಿ ಪೈಪ್‍ಗಳು ಒಡೆದು ಹಾಳಾಗಿದ್ದರೆ ತಕ್ಷಣವೇ ಬೇರೆ ಹಾಕಬೇಕು. ಕುಡಿಯುವ ನೀರು ಕಲುಷಿತವಾಗದಂತೆ ಎಚ್ಚರ ವಹಿಸಬೇಕೆಂದ ಸೂಚಿಸಿದರು.

ನಗರ ಭಾಗದಲ್ಲಿ ಜನವರಿವರೆಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆನಂತರ ಕುಡಿಯುವ ನೀರನ್ನು ಉತ್ತಮವಾಗಿ ನಿರ್ವಹಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮಾಡಬೇಕೆಂದರು.

ಸಭೆಯಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಎಎಸ್‍ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿಯುಡಿಸಿ ಯೋಜನಾ ನಿರ್ದೇಶಕ, ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...