Monday, December 15, 2025
Monday, December 15, 2025

Shivamogga Press Trust ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ

Date:

Shivamogga Press Trust ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು.

ಶಿವಮೊಗ್ಗದ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ ಹೆಜ್ಜೆ ಇಟ್ಟಿದೆ. ಸಂಘದಿಂದ ಈಗಾಗಲೇ ನಡೆದಿರುವ ಸಮಾಜಮುಖಿ ಕಾರ್ಯಗಳಿಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ತಿಳಿಸಿದರು.

ಪತ್ರಕರ್ತರ ಸಂಘ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಸಮಾಜದ ಬೇರೆ, ಬೇರೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲ ಮಾಡಬೇಕಾಗುತ್ತದೆ. ಇಂತಹ ಹೊಸ ದಿಕ್ಕಿನಲ್ಲಿ ಆಲೋಚನೆ ಮಾಡಬೇಕಿದೆ. ಸಂಘ ಎಂದ ಮೇಲೆ ಒಬ್ಬೊಬ್ಬರದು ಒಂದೊಂದು ರೀತಿ ಅಭಿಪ್ರಾಯಗಳಿರುತ್ತವೆ. ಇಲ್ಲಿ ಸಣ್ಣ ವ್ಯತ್ಯಾಸಗಳು ಸಹಜ. ನಮ್ಮೊಳಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ನಾಲ್ಕು ಗೋಡೆಗಳ ಚೌಕಟ್ಟಿನಲ್ಲಿ ಬಗೆಹರಿಸಿಕೊಂಡು ಒಗ್ಗೂಡಿ ಎಲ್ಲರೂ ಮುನ್ನಡೆಯಬೇಕಿದೆ ಎಂದು ಹೇಳಿದರು.

ಪತ್ರಕರ್ತರಿಗೆ ಪ್ರತ್ಯೇಕ ನಿಧಿ:

ಸದಾ ಒತ್ತಡದಲ್ಲೇ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ಒಡಗೂಡಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ಪ್ರತ್ಯೇಕ ನಿಧಿ ಸ್ಥಾಪನೆ ಮಾಡುವ ಉದ್ದೇಶ ಹೊಂದಲಾಗಿದೆ. ಇದಕ್ಕೆ ಕೆಲ ಗಣ್ಯರು ಒತ್ತಾಸೆಯಾಗಿ ನಿಲ್ಲುವುದಾಗಿ ಹೇಳಿದ್ದಾರೆ. ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕಿದೆ ಎಂದರು.

ಸಂಘವು ಈವರೆಗೆ ಆನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಇದಕ್ಕಾಗಿ ಬೇರೆಯವರ ಬಳಿ ಕೈ ಚಾಚ ಬಾರದು ಎಂಬುದು ಸಂಘದ ನಿಲುವಾಗಿದ್ದು, ಸಂಘದ ಇತಿಮಿತಿಯಲ್ಲೇ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕೆಲ ಕಾರ್ಯಕ್ರಮಗಳಿಗೆ ವಿವಿಧ ಸಂಘ-ಸಂಸ್ಥೆಗಳು ತಮ್ಮೊಂದಿಗೆ ಕೈ ಜೋಡಿಸಿವೆ. ಕೆಲ ದಾನಿಗಳು ನಮಗೆ ಸಹಕಾರ ನೀಡಿದ್ದಾರೆ. ಜೊತೆಗೆ ಪದಾಧಿಕಾರಿಗಳಿಂದಲೂ ಹಣ ಸಂಗ್ರಹ ಮಾಡಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ವಿವರಿಸಿದರು.

ಸಂಘದ 2022ನೇ-23ನೇ ಸಾಲಿನ ವಾರ್ಷಿಕ ವರದಿ ವಾಚಿಸಿದ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಕಾಚಿನಕಟ್ಟೆ, ಸಂಘದ ಉದ್ಘಾಟನೆ ಜೊತೆಗೆ ಮಾದಕ ವಸ್ತು ನಿರ್ಮೂಲನೆ ಅಭಿಯಾನ ನಡೆಸಲಾಯಿತು. ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ನಾಟಕೋತ್ಸವ ನಡೆಯಿತು. ಗ್ರಾಮ ಭೇಟಿ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡಸಲಾಯಿತು. ಈ ಎಲ್ಲ ಕಾರ್ಯಕ್ರಮಗಳಿಗೂ ಉತ್ತಮ ಪ್ರತಿಕ್ರಿಯೆ ವ್ಯಕಕ್ತವಾಗಿದೆ. ಮುಂದೆ ಇದೇ ರೀತಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಅವುಗಳ ಈಡೇರಿಕೆಗೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು.

Shivamogga Press Trust ಸಭೆ ಆರಂಭದಲ್ಲಿ ಅಗಲಿದ ಪತ್ರಕರ್ತರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಂಘದ ನಿರ್ದೇಶಕ ವಿವೇಕ್‌ ಮಹಾಲೆ ವಾರ್ಷಿಕ ಸಭೆಯ ನೊಟೀಸ್‌ ಓದಿದರು. ನಿರ್ದೇಶಕ ಯೋಗೇಶ್‌ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಹುಲಿಮನೆ ತಿಮ್ಮಪ್ಪ ಸ್ವಾಗತಿಸಿದರು. ಸಂತೋಷ್‌ ಕಾಚಿನಕಟ್ಟೆ ವಂದಿಸಿದರು. ನಿರ್ದೇಶಕ ರಾಮಚಂದ್ರ ಗುಣಾರಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಖಜಾಚಿ ಶಿವಮೊಗ್ಗ ನಂದನ್‌, ದೇರಿದಂತೆ ನಿರ್ದೇಶಕರು, ಕಾರ್ಯಕಾರಣಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...