Thursday, March 19, 2026
Thursday, March 19, 2026

Karnataka Examinations Authority  ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯಲ್ಲಿ ಅಕ್ರಮ 18 ಜನರ ಬಂಧನ

Date:

Karnataka Examinations Authority  ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಪೊಲೀಸರು ಒಟ್ಟು 18 ಜನರನ್ನು ಬಂಧಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಮಂಡಳಿಗಳು ಮತ್ತು ನಿಗಮಗಳಲ್ಲಿ ಪ್ರಥಮ ವಿಭಾಗದ ಸಹಾಯಕ ಎಫ್ ಡಿಎ ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆಗಳನ್ನು ನಡೆಸಿತ್ತು. ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಲೋಪದೋಷ ಪತ್ತೆಯಾಗಿದೆ.

ಬ್ಲೂಟೂತ್ ಬಳಸಿ ಉತ್ತರ ಹೇಳುತ್ತಿದ್ದ ಮತ್ತು ಪಡೆಯುತ್ತಿದ್ದವರನ್ನು ಪೋಲೀಸರು ಬಂಧಿಸಿದ್ದಾರೆ. ಅವರ ಪ್ರಕಾರ ಕಲಬುರ್ಗಿಯಲ್ಲಿ 09 ಮಂದಿ, ಯಾದಗಿರಿ ಜಿಲ್ಲೆಯಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಐವರು ಆರೋಪಿಗಳು ಮೊಬೈಲ್ ಮೂಲಕ ಉತ್ತರ ನೀಡುತ್ತಿದ್ದರು ಎಂದು ಪೊಲೀಸ್ ಒಬ್ಬರು ಮಾಹಿತಿ ನೀಡಿದ್ದಾರೆ.

Karnataka Examinations Authority  ಒಟ್ಟು ಸುಮಾರು ಎಂಟು ಕಡೆ ಪರಿಶೀಲಿಸಿದ ಅಧಿಕಾರಿಗಳು ಆಕಾಂಕ್ಷಿಗಳನ್ನು ಬಂಧಿಸಿದ್ದಾರೆ. ಅಫಜಲಪುರದ ತ್ರಿಮೂರ್ತಿ ಎಂಬ ಅಭ್ಯರ್ಥಿ ಕಿವಿಯಲ್ಲಿ ಬ್ಲೂಟೂತ್ ಮತ್ತು ಹೊಟ್ಟೆ ಬಳಿ ಬಟ್ಟೆಯೊಳಗೆ ರಿಸೀವರ್ ಇಟ್ಟುಕೊಂಡು ಪರೀಕ್ಷೆಗೆ ಹಾಜರಾಗಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...