Shivamogga Police ಕಾರೊಂದು ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರಂಗಡಿ ಸಮೀಪ ನೆಡೆದಿದೆ.
ಕಾರಿನ ಇಂಜಿನ್ ಅತಿಯಾಗಿ ಬಿಸಿಯಾಗಿದ್ದ ಕಾರಣ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗಿದೆ. ಆದರೆ ಬೆಂಕಿ ಸಂಪೂರ್ಣ ಕಾರನ್ನು ಹೊತ್ತಿಕೊಂಡು ಉರಿದಿದ್ದು ತೀರ್ಥಹಳ್ಳಿ – ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ ಈ ಘಟನೆ ಸಂಭವಿಸಿದೆ.
Shivamogga Police ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ ಸಿಕ್ಕಿಲ್ಲ. ಸ್ವಲ್ಪ ಸಮಯ ಟ್ರಾಫಿಕ್ ಕೂಡ ಜಾಮ್ ಆಗಿತ್ತು. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.