Kerala Bomb Blast ಕೇರಳದ ಎರ್ನಾಕುಲಂ ಜಿಲ್ಲೆಯ ಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನೆ ಸಭೆ ನಡೆಸುತ್ತಿದ್ದಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ಮೂರಕ್ಕೆ ಏರಿದೆ.
ಭಾನುವಾರ ನಡೆದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ನಡೆದ ಸ್ಫೋಟದಲ್ಲಿ ಗಾಯಗೊಂಡ 50 ಜನರ ಪೈಕಿ 12 ವರ್ಷದ ಬಾಲಕಿ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಸ್ಪೋಟದಲ್ಲಿ ಬಾಲಕಿ ಕೇರಳದ ಎರ್ನಾಕುಲಂ ಜಿಲ್ಲೆಯ ಲಿಬಿನಾ ತೀವ್ರವಾಗಿ ಗಾಯಗೊಂಡಿದ್ದಳು. ಲಿಬಿನಾ ಅವರ ದೇಹದ ಶೇಕಡ 95 ರಷ್ಟು ಭಾಗ ತೀವ್ರವಾಗಿ ಸುಟ್ಟು ಹೋಗಿತ್ತು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.
ಮೂರು ದಿನಗಳ ಪ್ರಾರ್ಥನಾ ಸಭೆಯ ಮುಕ್ತಾಯದ ದಿನದಂದು ಅಲ್ಪಸಂಖ್ಯಾತ ಕ್ರಿಶ್ಚಿಯನ್ ಗುಂಪು ನೂರಾರು ಅನುಯಾಯಿಗಳು ಯೆಹೋವನ ಪ್ರಾರ್ಥನೆಗಾಗಿ ಒಟ್ಟುಗೂಡಿದಾಗ ಸ್ಫೋಟಗಳು ಸಂಭವಿಸಿದವು.
Kerala Bomb Blast ಇದಕ್ಕೂ ಮೊದಲು ಸ್ಫೋಟಗಳಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಈ ಸ್ಪೋಟ ಸಂಭವಿಸಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ.