Karnataka Public Service Commission ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಒಟ್ಟು 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ (RPC) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸೆಪ್ಟೆಂಬರ್ 1 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.
ಹುದ್ದೆ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ (RPC),
ಒಟ್ಟು ಹುದ್ದೆ 230,
ವಿದ್ಯಾರ್ಹತೆ ಪದವಿ,
ವೇತನ ಮಾಸಿಕ ₹ 33,450-62,600,
ಉದ್ಯೋಗದ ಸ್ಥಳ ಕರ್ನಾಟಕ
ಉಳಿಕೆ ಮೂಲವೃಂದದ ಗ್ರೂಪ್ ‘ಸಿ’ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರವೀಕ್ಷಕರ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ವಿದ್ಯಾರ್ಹತೆ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
PH/ ವಿಧವಾ ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/ ಪ್ರವರ್ಗ-1 & PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ.
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ.
ಸಾಮಾನ್ಯ ಅಭ್ಯರ್ಥಿಗಳು- 600 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ಮಾಸಿಕ ₹ 33,450-62,600
Karnataka Public Service Commission ಉದ್ಯೋಗದ ಸ್ಥಳ:
ಕರ್ನಾಟಕ
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ