Thursday, June 18, 2026
Thursday, June 18, 2026

Karnataka Rajyotsava ಕನ್ನಡವೇ ಸತ್ಯ, ಕನ್ನಡವೇ ನಿತ್ಯ

Date:

Karnataka Rajyotsava ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡ ದಿನವೆಂದು ಆಚರಣೆ ಮಾಡಲಾಗುತ್ತದೆ. ಈ ದಿನವನ್ನು ಕರ್ನಾಟಕ ರಚನೆಯ ದಿನ ಎಂದು ಕರೆಯಲಾಗುತ್ತದೆ.

ಎಲ್ಲಾದರೂ ಇರು ಎಂತಾದರೂ ಇರು… ಎಂದೆಂದಿಗೂ ನೀ ಕನ್ನಡವಾಗಿರು… ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬ ಸಾಲುಗಳನ್ನು ನಮ್ಮ ರಾಷ್ಟ್ರ ಕವಿ ಕುವೆಂಪು ಅವರು ರಚಿಸಿದ್ದಾರೆ. ಈ ಸಾಲುಗಳು ನಾವು ಎಲ್ಲೇ ಹೋದ್ರು, ಎಲ್ಲೇ ಇದ್ದರೂ ನಮ್ಮ ಕನ್ನಡವನ್ನು ಬಿಟ್ಟು ಕೊಡಬಾರದು ಎಂಬುವುದನ್ನು ಒತ್ತಿ ಹೇಳುತ್ತದೆ… ಕನ್ನಡ ಕೇವಲ ಭಾಷೆ ಯಾಗಿರದೆ , ಭಾವನೆಯೂ ಆಗಿದೆ…

ಕರ್ನಾಟಕ ರಾಜ್ಯಕ್ಕೆ ಮೊದಲ ಹೆಸರು ಮೈಸೂರು ರಾಜ್ಯ. 1956ರ ನವೆಂಬರ್ 1ರಂದು ವಿವಿಧ ಪ್ರದೇಶಗಳಲ್ಲಿ ಕನ್ನಡ ಮಾತನಾಡುತ್ತಿದ್ದ, ಜನರನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ರಚನೆ ಮಾಡಲಾಯಿತು. 1973ರ ನವೆಂಬರ್ 1ರಂದು ರಾಜ್ಯದ ಹೆಸರನ್ನು ಕರ್ನಾಟಕ ಎಂದು ಬದಲಾಯಿಸಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವಾಗ ದೇವರಾಜ್ ಅರಸ್ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳಿತ್ತು. ಈಗ ಕರ್ನಾಟಕದಲ್ಲಿ 31 ಜಿಲ್ಲೆಗಳಿವೆ. ನಮ್ಮ ಕರ್ನಾಟಕವನ್ನು ಕನ್ನಡ ನಾಡು, ಕರುನಾಡು, ಶ್ರೀಗಂಧದ ನಾಡು ಎಂದು ಕೂಡ ಕರೆಯಲಾಗುತ್ತದೆ. ನಮ್ಮ ನಾಡ ದೇವಿ ಭುವನೇಶ್ವರಿ. ನಮ್ಮ ರಾಜ್ಯದ ಬಾವುಟ ಹಳದಿ ಮತ್ತು ಕೆಂಪು ಬಣ್ಣದಿಂದ ಕೂಡಿದೆ. ಕನ್ನಡ ಹೋರಾಟಗಾರರಾದ ಎಂ. ರಾಮಮೂರ್ತಿ ಅವರು ಮತ್ತು ಕೆಂಪು ಬಣ್ಣದ ಬಾವುಟವನ್ನು ಸಿದ್ಧಪಡಿಸಿದ್ದರು. ಹಳದಿ ಬಣ್ಣವು ಶಾಂತಿ ಹಾಗೂ ಸೌಹಾರ್ದತೆಯನ್ನು ಸೂಚಿಸುತ್ತದೆ. ಕೆಂಪು ಬಣ್ಣವು ಕ್ರಾಂತಿಯ ಸಂಕೇತವಾಗಿದೆ. ಕನ್ನಡಾಂಬೆ ಭುವನೇಶ್ವರಿಯ ಅರಿಶಿಣ ಕುಂಕುಮದ ಸಂಕೇತವು ಕೂಡ ಆಗಿದೆ.

Karnataka Rajyotsava ಇತ್ತೀಚಿನ ವರ್ಷಗಳಲ್ಲಿ ಕನ್ನಡದ ಸ್ಥಿತಿಗತಿ ಬದಲಾಗಿದೆ. ಕನ್ನಡದ ಮೇಲೆ ಇತರೆ ಭಾಷಿಕರ ದಬ್ಬಾಳಿಕೆ ಹೆಚ್ಚಾಗಿದೆ. ಕನ್ನಡಿಗರಿಗೆ ಉದ್ಯೋಗ ದೊರಕುವುದು ಕಷ್ಟವಾಗಿದೆ. ಇಂತಹ ಸಮಯದಲ್ಲಿ ಕನ್ನಡದ ಅಸ್ಮಿತೆಗಾಗಿ ಎಲ್ಲರೂ ಹೋರಾಡಬೇಕಾಗಿದೆ. ಕೇವಲ ಈ ದಿನ ಮಾತ್ರ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಕನ್ನಡ ಉಳಿಸಿದಂತೆ ಆಗುವುದಿಲ್ಲ. ಕನ್ನಡ ನಮ್ಮ ಉಸಿರಾಗಿರಬೇಕು. ಎಂತಹ ಸಂದರ್ಭದಲ್ಲೂ ಕನ್ನಡ ಬಿಟ್ಟುಕೊಡಬಾರದು. ಬೇರೆ ಭಾಷೆಗಳನ್ನು ಕಲಿಯುವುದು ಖಂಡಿತ ತಪ್ಪಲ್ಲ. ಆದರೆ ಬೇರೆ ಭಾಷೆ ಕಲಿತು ಕನ್ನಡ ಮರೆಯುವುದು ತಪ್ಪು. ಈ ಸುಂದರ ಸಂಭ್ರಮದ ದಿನದಂದು ನಾವೆಲ್ಲರೂ ನಮ್ಮ ನೆಲ, ಜಲ, ಭಾಷೆ ಉಳಿವಿಗಾಗಿ ಪಣ ತೊಡಬೇಕಾಗಿದೆ.

ಕೆ ಲೈವ್ ಓದುಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...