Wednesday, September 16, 2026
Wednesday, September 16, 2026

Siddaramaiah ಕನ್ನಡ ರಾಜ್ಯೋತ್ಸವ ಕನ್ನಡಿಗರ ಪಾಲಿಗೆ ವಿಶೇಷ ದಿನ – ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Siddaramaiah ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ.
ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...