Thursday, June 18, 2026
Thursday, June 18, 2026

Ispit Game Arrested ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್ : 14 ಸಾವಿರ ರೂ. ನಗದು ವಶ

Date:

Ispit Game Arrested ರಿಪ್ಪನ್‌ಪೇಟೆ ಪಟ್ಟಣದ ಗವಟೂರು ಗ್ರಾಮದ ಖಾಸಗಿ ಕಟ್ಟಡದ ಹಿಂಭಾಗದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 14,700 ರೂ ನಗದು ವಶಪಡಿಸಿಕೊಳ್ಳಲಾಗಿದೆ.

ಗವಟೂರು ಗ್ರಾಮದ ಖಾಸಗಿ ಕಟ್ಟಡವೊಂದರ ಹಿಂಭಾಗದಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ರಿಪ್ಪನ್‌ಪೇಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ಜೂಜಾಟ ಕ್ಕೆ ತೊಡಗಿಸಿಕೊಂಡಿದ್ದ 14,700 ರೂಗಳನ್ನು 52 ಇಸ್ಪೀಟ್ ಎಲೆ, ಚಾರ್ಜರ್ ಲೈಟ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳಾದ ಉಜ್ಜಪ್ಪಗೌಡ,ವಿಜಯ್ ಕುಮಾರ್ ,ಚಂದ್ರಚಾರ್ಯ , ರಮೇಶ್ ,ಮಂಜುನಾಥ ,ನವೀನ್ ಹಾಗೂ ಸೋಮಶೇಖರ್ ವಿರುದ್ದ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ.

Ispit Game Arrested ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ ಕೆ, ಎ ಎಸ್ ಪಿ ಅನಿಲ್ ಕುಮಾರ್, ಎನ್ ಬೂಮರೆಡ್ಡಿ ತೀರ್ಥಹಳ್ಳಿ ಉಪ ವಿಭಾಗದ ಡಿ ವೈ ಎಸ್ ಪಿ ಗಜಾನನ ಎಂ ಸುತಾರ, ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಮಾರ್ಗದರ್ಶನದಲ್ಲಿ ಪ್ರವೀಣ್ ಎಸ್ ಪಿ ರವರು ಸಿಬ್ಬಂದಿಗಳಾದ ಉಮೇಶ್ , ಶಿವಕುಮಾರ್ ,ಮಧುಸೂಧನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...