Thursday, September 17, 2026
Thursday, September 17, 2026

Siddaramaiah ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ನೀರು ಪೂರೈಕೆ

Date:

Siddaramaiah ರಾಜ್ಯಕ್ಕೆ ಈಗಾಗಲೇ ಐದು ಗ್ಯಾರಂಟಿ ಘೋಷಿಸಿರುವ ರಾಜ್ಯ ಸರ್ಕಾರವು ನಾಲ್ಕು ಗ್ಯಾರೆಂಟಿಗಳಿಗೆ ಚಾಲನೆ ನೀಡಿದೆ. ಈಗ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವ ಗ್ಯಾರಂಟಿಯನ್ನು ಘೋಷಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಶಿಕ್ಷಣ ಇಲಾಖೆಯ ಹಲವು ವರ್ಷಗಳ ಮನವಿಯನ್ನು ಪುರಸ್ಕರಿಸಿ, ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ತಕ್ಷಣದಿಂದಲೇ ಉಚಿತ ವಿದ್ಯುತ್ ಸಂಪರ್ಕ ಹಾಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವುದಾಗಿ ತಿಳಿಸಿದರು.

Siddaramaiah ನಮ್ಮ ಸರ್ಕಾರ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಜಾರಿಗೆ ಎಷ್ಟೇ ಪ್ರಯತ್ನ ಪಟ್ಟರೂ, ಸುಪ್ರೀಂ ಕೋರ್ಟ್ ಮಾಧ್ಯಮ ಪೋಷಕರ ಆಯ್ಕೆ ತೀರ್ಪು ನೀಡಿರುವುದರಿಂದ ನಮಗೆ ಹಿನ್ನಡೆಯಾಗಿದೆ. ಪೋಷಕರು ಆಂಗ್ಲ ಮಾಧ್ಯಮ ವ್ಯಾಮೋಹ ಕಡಿಮೆ ಮಾಡಿಕೊಳ್ಳಬೇಕು. ಕನ್ನಡ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸಲು ಪಣತೊಡಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...