Rotary Club Shimoga ಮಹಿಳೆಯರ ಸಬಲೀಕರಣ ದೃಷ್ಠಿಯಿಂದ ಅವಶ್ಯವಿರುವ ನೆರವನ್ನು ಸಂಘ ಸಂಸ್ಥೆಗಳು ಒದಗಿಸುವಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಅಭಿಪ್ರಾಯ ಪಟ್ಟರು.
ಶಿವಮೊಗ್ಗ ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಾಗೂ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಸಂದರ್ಭದಲ್ಲಿ ಐದು ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದರು.
ಆಧುನಿಕ ಪ್ರಪಂಚದಲ್ಲಿ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಅನೇಕ ಅವಕಾಶಗಳಿದ್ದು, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುವ ದಿಸೆಯಲ್ಲಿ ಮುನ್ನಡೆಯಬೇಕು. ವಿವಿಧ ಸಂಘ ಸಂಸ್ಥೆಗಳಿಂದ ಸಿಗುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಣ ಮತ್ತು ಗ್ರಾಮೀಣ ಕ್ಷೇತ್ರದಲ್ಲಿ ರೋಟರಿ ಸಂಸ್ಥೆ ವತಿಯಿಂದ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಸಮಾಜಮುಖಿ ಸೇವೆಗಳ ಮುಖಾಂತರ ಜನಮಾನಸ ತಲುಪಲಾಗಿದೆ. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಉತ್ತಮ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದರು.
ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವ ಆಶಯದಿಂದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಮಾತ್ಯಂಗಿ ಸಂಜೀವಿನಿ ಸಂಘದ 50 ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಲಾಯಿತು.
ವಲಯ 11ರ ಸಹಾಯಕ ಗವರ್ನರ್ ರವಿ ಕೊಟೋಜಿ ಹಾಗೂ ವಲಯ ಸೇನಾನಿ ಧರ್ಮೇಂದ್ರ ಸಿಂಗ್ ಮಾತನಾಡಿ ಶುಭ ಹಾರೈಸಿದರು.
ವಿಶೇಷ ಸಾಧನೆ ಮಾಡಿದ ಪ್ರನೀಲ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ನಿರಂತರವಾಗಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಸಾವಿರಾರು ಜನರಿಗೆ ಅಗತ್ಯ ಸೇವಾ ಕಾರ್ಯಗಳನ್ನು ತಲುಪಿಸಿದೆ. ಇದೀಗ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
Rotary Club Shimoga ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಡಾ. ಗುಡದಪ್ಪ ಕಸಬಿ, ವಸಂತ ಹೋಬಳಿದಾರ್, ಚಂದ್ರಹಾಸ ಪಿ.ರಾಯ್ಕರ್, ಪರಮೇಶ್ವರ ಶಿಗ್ಗಾವ್, ಎ.ಟಿ.ಸುಬ್ಬೇಗೌಡ, ಶ್ರೀಕಾಂತ್, ಮಂಜುನಾಥ್ ಕದಂ, ಮಹೇಶ, ಕೆ.ಪಿ.ರಾಮಚಂದ್ರರಾವ್, ನಾಗವೇಣಿ, ಬೆನಕಪ್ಪ, ಮಂಜುನಾಥ್ ಮತ್ತಿತರರ ಉಪಸ್ಥಿತರಿದ್ದರು.