B. S. Yediyurappa ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಎಐಸಿಸಿ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಅನಗತ್ಯವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.ಇವರ ಆಂತರಿಕ ಕಚ್ಚಾಟದಿಂದಾಗಿ ಅಭಿವೃದ್ದಿ ಕಾಮಗಾರಿಗಳು ನಿಂತುಹೋಗಿವೆ ಎಂದು ಆರೋಪಿಸಿದರು.
ಬೆಂಗಳೂರಿನ ಮಲ್ಲೇಶ್ವರಂ
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮಾತನಾಡಿ,ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸುರ್ಜೆವಾಲ ಮತ್ತು ಕೆ.ಸಿ.ವೇಣುಗೋಪಾಲ್ ಕರ್ನಾಟಕಕ್ಕೆ ಏಕಾಏಕಿ ಬಂದಿದ್ದು ಏಕೆ ಎಂಬುದು ಎಲ್ಲರಿಗೂ ಗೊತ್ತಿದೆ.ಸಚಿವರು ಮತ್ತು ಶಾಸಕರು ನಾಯಿನರಿಗಳ ತರ ಕಿತ್ತಾಡಿಕೊಳುತ್ತಿದ್ದಾರೆ. ಉಸ್ತುವಾರಿಗಳು ರಾಜ್ಯಕ್ಕೆ ಬರುವುದು ವಸೂಲಿಗೆ ಎಂಬುದು ಬಾಯ್ಬಿಟ್ಟು ಹೇಳಬೇಕೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ,ಅಧಿಕಾರಕ್ಕೆ ಬಂದು ಆರು ತಿಂಗಳಾಗಿದೆ. ಆದರೆ ಸರ್ಕಾರ ಮಾತ್ರ ಗಾಳಿಯಿಲ್ಲದೇ ಮುಂದೆ ಹೋಗುತ್ತಿಲ್ಲ.ತಮ್ಮ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ*. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಚಿತ್ರ ಪರಿಸ್ಥಿತಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.
B. S. Yediyurappa ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಡಾ.ಸಿ.ಎನ್.ಅಶ್ವಥ್ ನಾರಾಯಣರವರು,ಮಾಜಿ ಸಚಿವರಾದ ಶ್ರೀ ಗೋವಿಂದ ಆರ್ ಕಾರಜೋಳ್ ರವರು, ಶಾಸಕರಾದ ಶ್ರೀ ರಘುರವರು,ಶ್ರೀ ಎಸ್.ಆರ್.ವಿಶ್ವನಾಥ್ ರವರು, ವಿಧಾನಪರಿಷತ್ ಸದಸ್ಯ ಶ್ರೀ ರವಿಕುಮಾರ್ ರವರು,ರಾಜ್ಯಸಭಾ ಸದಸ್ಯ ಶ್ರೀ ಲೆಹರ್ ಸಿಂಗ್ ರವರು, ಮತ್ತಿತರರು ಉಪಸ್ಥಿತರಿದ್ದರು.