Friday, December 5, 2025
Friday, December 5, 2025

Siddaramaiah ಮಾಜಿ ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ…!

Date:

Siddaramaiah ಪ್ರತಿನಿತ್ಯ ಬೈದರೆ ಪ್ರಧಾನಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ. ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ.
ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪನವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ ಎಂದು ಹೇಳಿದ್ದಾರೆ.

ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ.
ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ. ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ಮೋದಿಯವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲಾ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ.
ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಯಡಿಯೂರಪ್ಪನವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ.
ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆದ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ ಎಂದು ತಿಳಿಸಿದ್ದಾರೆ.

Siddaramaiah ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ.
ಯಡಿಯೂರಪ್ಪನವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...