Friday, April 10, 2026
Friday, April 10, 2026

Zika virus ಝಿಕಾ ವೈರಸ್ ಸೋಂಕು-ಭಯಬೇಡ ಎಚ್ಚರವಿರಲಿ: ಡಾ.ಆರ್ ಸೆಲ್ವಾಮಣಿ

Date:

Zika virus ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‍ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿದ್ದಾರೆ.

ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು, ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ.

ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ ಬೆಳವಣಿಗೆ ದೋಷ ಕಂಡುಬರಬಹುದು.

ಝಿಕಾ ವೈರಸ್ ಪತ್ತೆ ಹಚ್ಚುವ ವಿಧಾನ :

ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.
ಝಿಕಾ ವೈರಸ್ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳುವ ಕ್ರಮ :

• ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ.

• ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು.

• ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು.

• ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.

  • ಝಿಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸುವುದು.
    ಝಿಕಾ ವೈರಸ್ ಸೋಂಕು ಬರದಂತೆ ತಡೆಯಲು ಮುಂಜಾಗ್ರತಾ ಕ್ರಮ :
  1. ಸ್ವಚ್ಛ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು.
  2. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು.
  3. ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು.
  4. ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು.
  5. Zika virus ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...