Monday, February 2, 2026
Monday, February 2, 2026

Election Commission ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಕೆಗೆ ಅವಧಿ ನಿಗದಿ

Date:

Election Commission ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2024ಗೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ದಿ: 27-10-2023 ರಂದು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ಪ್ರಚುರಪಡಿಸಿದ್ದು ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿ: 09-12-2023 ರವರೆಗೆ ಕಾಲಾವಧಿಯನ್ನ ಚುನಾವಣಾ ಆಯೋಗವು ನಿಗದಿಪಡಿಸಿದೆ.

ಈ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಯಿಂದ ಬಾಧಿತರಾದವರು ತಮ್ಮ ಆಕ್ಷೇಪಣೆಯನ್ನು ಅವಶ್ಯಕತೆಗೆ ಅನುಗುಣವಾಗಿ ನಮೂನೆ 6, 7, 8 ನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಬಿಎಲ್‍ಓ ಆ್ಯಪ್ ಮೂಲಕ ಅಥವಾ https://www.nvsp.in/Web Portal ಹಾಗೂ Voter Helpline App ಮೂಲಕ ಸಲ್ಲಿಸಬಹುದಾಗಿರುತ್ತದೆ.

Election Commission ಚುನಾವಣಾ ಆಯೋಗವು ಮತದಾರರ ವಿಶೇಷ ಆಂದೋಲನವನ್ನು ದಿ: 18-11-2023, 19-11-2023, 02-12-23 ಹಾಗೂ 03-12-2023 ರಂದು ನಿಗದಿಪಡಿಸಿದೆ. ಈ ದಿನಾಂಕಗಳಂದು ಮತಗಟ್ಟೆ ಮಟ್ಟದ ಅಧಿಕಾರಿಳು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.

ಕರಡು ಮತದಾರರ ಪಟ್ಟಿಯನ್ನು ವೆಬ್‍ಸೈಟ್ Voter Helpline App ರಲ್ಲಿ ಪರಿಶೀಲಿಸಬಹುದಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಹಾಗೂ ಶಿವಮೊಗ್ಗ ಗ್ರಾಮಾತರ ವಿಧಾನಸಭಾ ಕ್ಷೇತ್ರ ಸಹಾಯಕ ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...