Friday, November 22, 2024
Friday, November 22, 2024

Madhu Bangarappa ರಸ್ತೆ, ಸೇತುವೆ, ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ : ಮಧು ಎಸ್.ಬಂಗಾರಪ್ಪ

Date:

Madhu Bangarappa ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಕೈಗೊಳ್ಳಲಾಗಿರುವ ರಸ್ತೆ, ವರ್ತುಲ ರಸ್ತೆ, ಸೇತುವೆ, ಮೇಲ್ಸೇತುವೆ, ಹೆದ್ದಾರಿ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಈ ಕಾಮಗಾರಿಗಳು ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳಲು ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಲೋಕೋಪಯೋಗಿ ಇಲಾಖಾ ಅಭಿಯಂತರರಿಗೆ ಸೂಚಿಸಿದರು.

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಸಂಪರ್ಕ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಯೋಜನೆಗಳ ಸಕಾಲಿಕ ಅನುಷ್ಠಾನದಿಂದಾಗಿ ನಗರಗಳಲ್ಲಿನ ಸಂಚಾರ ದಟ್ಟಣೆ ನಿಯಂತ್ರಣಗೊಳ್ಳಲಿದೆ. ಅಲ್ಲದೇ ಆಕಸ್ಮಿಕ ಅಪಘಾತಗಳು ನಿಯಂತ್ರಣಗೊಳ್ಳಲಿದೆ ಮಾತ್ರವಲ್ಲ ಮಾಲಿನ್ಯ ನಿಯಂತ್ರಣಗೊಳ್ಳಲಿದೆ. ಪ್ರವಾಸಿಗರಿಗೆ ಕ್ರಮಿಸುವ ದೂರ ಹಾಗೂ ಸಮಯದ ಉಳಿತಾಯವಾಗಲಿದೆ ಎಂದರು.

ಈ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಇರಬಹುದಾದ ಹಾಗೂ ನ್ಯಾಯಾಲಯದಲ್ಲಿರುವ ಮೊಕದ್ದಮೆಗಳನ್ನು ನಿಯಮಾನುಸಾರ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು. ಅದಕ್ಕಾಗಿ ಅಧಿಕಾರಿಗಳು ಸಕಾಲಿಕ ಕ್ರಮ ಕೈಗೊಳ್ಳಬೇಕು. ಭೂಸ್ವಾದೀನ ಪ್ರಕ್ರಿಯೆ ಬಾಕಿ ಇದ್ದಲ್ಲಿ ಸಂಬoಧಿತ ವ್ಯಕ್ತಿ ಅಥವಾ ಆಸ್ತಿಗಳ ಮಾಲೀಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಬoಧಿತ ಇಲಾಖಾ ಅಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ರೈತರು, ಸಂತ್ರಸ್ಥರ ಸಭೆಯನ್ನು ಕರೆದು ಮನವೊಲಿಸಿ, ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಇದಕ್ಕಾಗಿ ಸರ್ಕಾರದ ವತಿಯಿಂದ ಅಗತ್ಯ ಸಹಕಾರವನ್ನು ಒದಗಿಸಲಾಗುವುದು ಎಂದರು.

ಈ ಎಲ್ಲಾ ಯೋಜನೆಗಳ ಅನುಷ್ಠಾನದಲ್ಲಿ ಕಂದಾಯ, ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ, ಅರಣ್ಯ ಇಲಾಖೆ ಸೇರಿದಂತೆ ಸಂಬoಧಿತ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಿದೆ. ಕೆಲವು ಕಾಮಗಾರಿಗಳು ಆರಂಭಗೊoಡು ಕೆಲವು ವರ್ಷಗಳೇ ಕಳೆದಿದ್ದರೂ ನಿರೀಕ್ಷಿತ ಪ್ರಗತಿ ಸಾಧ್ಯವಾಗದಿರುವುದು ಬೇಸರವೆನಿಸಿದೆ. ಸಂಬoಧಿತ ಇಲಾಖೆಗಳ ಅಧಿಕಾರಿಗಳು ಗುತ್ತಿಗೆದಾರರಿಗೆ ಗಡುವು ನೀಡಿ ಗುಣಮಟ್ಟದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಾಗೂ ಕಾಮಗಾರಿಗಳಿಗೆ ಬಳಸುತ್ತಿರುವ ಮಾನವ ಸಂಪನ್ಮೂಲವನ್ನು ಹೆಚ್ಚಿಸಿಕೊಂಡು ಕೂಡಲೇ ಪೂರ್ಣಗೊಳಿಸಲು ಸೂಚಿಸುವಂತೆ ಸಚಿವರು ಅಧಿಕಾರಿಗಳಿಗೆ ಹೇಳಿದರು.

ಶಿವಮೊಗ್ಗ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ ವಿಳಂಬದಿoದಾಗಿ ಜನಸಾಮಾನ್ಯರಿಗೆ ತೀವ್ರತರಹದ ಅಡಚಣೆ ಉಂಟಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ತುಂಗಾ ಸೇತುವೆಯ ಒತ್ತುವರಿಯನ್ನು ತೆರವುಗೊಳಿಸಿ, ಉದ್ದೇಶಿತ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚಿಸಿದರು.

Madhu Bangarappa ಸಾಗರದ ಚತುಷ್ಟಥ ರಸ್ತೆ, ಶಿಕಾರಿಪುರ ವರ್ತುಲ ರಸ್ತೆ, ಬೈಂದೂರು-ರಾಣೆಬೆನ್ನೂರು ರಸ್ತೆ ಅಗಲೀಕರಣ ಕಾಮಗಾರಿ, ತುಮಕೂರು-ಹೊನ್ನಾವರ ರಸ್ತೆ, ಮೇಗರವಳ್ಳಿ-ಆಗುಂಬೆ, ಶಿವಮೊಗ್ಗ-ಚಿತ್ರದುರ್ಗ ರಸ್ತೆ ಮುಂತಾದ ಕಾಮಗಾರಿ ಹಾಗೂ ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.

ಶಿವಮೊಗ್ಗ-ಮಂಗಳೂರು ಚತುಷ್ಪಥ ರಸ್ತೆ ಭೂಸ್ವಾದೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸಿಗಂಧೂರು ಸೇತುವೆ ನಿರ್ಮಾಣಕ್ಕೆ ನೀರಿನ ಕೊರತೆ ಇದೆ ಅಲ್ಲದೇ ನಿರಂತರ ವಿದ್ಯುತ್ ಇಲ್ಲದಿರುವುದು ಅಡಚಣೆಗೆ ಕಾರಣವಾಗಿದೆ. ವಿದ್ಯುತ್ತನ್ನು ನಿರಂತರವಾಗಿ ಕೆಲಸಕ್ಕೆ ಅಡಚಣೆ ಉಂಟಾಗದoತೆ ಸರಬರಾಜು ಮಾಡಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು.

ಅಲ್ಲದೇ ಜಿಲ್ಲೆಯ ಕೈಗೊಳ್ಳಲಾಗಿರುವ ಅನೇಕ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಿಗಧಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಅಗತ್ಯವಿರುವಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವoತೆ ಸಚಿವರು ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ|ಆರ್.ಸೆಲ್ವಮಣಿ, ಸಿಸಿಎಫ್ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...