Wednesday, September 16, 2026
Wednesday, September 16, 2026

Rain Effect ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ

Date:

Rain Effect ರಿಪ್ಪನ್‌ಪೇಟೆಯಲ್ಲಿ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ.

ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು ಸಿಡಿಲಬ್ಬರದ ಧಾರಾಕಾರ ಮಳೆಗೆ ಹೆಚ್. ಕುನ್ನೂರು ಗ್ರಾಮದ ತಿಮ್ಮಪ್ಪ ಎಂಬುವವರ ಮನೆ ಮೇಲೆ ರಾತ್ರಿ 11 ರ ಸುಮಾರಿಗೆ ಮನೆ ಪಕ್ಕದಲ್ಲಿದ್ದ ಬೃಹತ್ ಆಕಾರದ ಮರ ಬುಡ ಸಮೇತವಾಗಿ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದ್ದು ಅದೃಷ್ಟವಶಾತ್ ಈ ಘಟನೆಯಲ್ಲಿ ಆಶಾ ಕಾರ್ಯಕರ್ತೆ ವಿನೂತ, ತಿಮ್ಮಪ್ಪ ದಂಪತಿಗಳು ಸಣ್ಣ-ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆಯಲ್ಲಿ ಮನೆಯಲ್ಲಿದ್ದ ಟಿವಿ ಸೇರಿದಂತೆ ದವಸ, ಧಾನ್ಯಗಳು, ಆಹಾರ ಪದಾರ್ಥಗಳು ಸೇರಿದಂತೆ ಇನ್ನಿತರ ವಸ್ತುಗಳು ನೀರುಪಾಲಾಗಿದ್ದು ಮೇಲ್ಛಾವಣಿಗೆ ಹಾಕಿದ್ದ ಸಿಮೆಂಟ್ ಶೀಟ್, ಹೆಂಚುಗಳು ಸೇರಿದಂತೆ ಭಾಗಶಃ ಮನೆ ಜಖಂಗೊಂಡಿದೆ.

ವಿಷಯ ತಿಳಿಯುತ್ತಿದ್ದಂತೆ ಕೋಡೂರು ಗ್ರಾಪಂ ಅಧ್ಯಕ್ಷ ಉಮೇಶ್, ಸದಸ್ಯ ಮಂಜಪ್ಪ, ಪಿಡಿಒ ನಾಗರಾಜ್, ತಾಪಂ ಮಾಜಿ ಸದಸ್ಯ ಚಂದ್ರಮೌಳಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಇನ್ನಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Rain Effect ಹೊಸನಗರ ತಾಲೂಕಿನಾದ್ಯಂತ ಭಾನುವಾರ ರಾತ್ರಿಯಿಡಿ ಎಡೆಬಿಡದೆ ಗುಡುಗು ಸಿಡಿಲಬ್ಬರದಿಂದ ಬಿರುಗಾಳಿ ಸಹಿತ ಭಾರಿ ಪ್ರಮಾಣದ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿತ್ತು. ರಾತ್ರಿ 8 ಗಂಟೆಗೆ ಆರಂಭವಾದ ಮಳೆ ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡಿದೆ. ವಿದ್ಯುತ್ ಸಹ ವ್ಯತ್ಯಯಗೊಂಡಿದೆ. ಇಂದು ಸಹ ಮಳೆಯಾಗುವ ನಿರೀಕ್ಷೆ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...