Health Tips ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಮತ್ತು ಭಯ ಬೇಡ ಆದರೆ ಎಚ್ಚರವಿರಲಿ ಎಂದು ನಾರಾಯಣ ಹೃದಯಾಲಯದ ವೈದ್ಯರಾದ ಡಾ. ಕೀರ್ತನಾ ಹೇಳಿದರು.
ರಿಪ್ಪನ್ ಪೇಟೆ ಪಟ್ಟಣದ ಗ್ರಾಮ ಪಂಚಾಯತ್ ಆವರಣದಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ನಾರಾಯಣ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಮ್ಯಾಮೊಗ್ರಫಿ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಸ್ತನ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ತೋರುವುದರಿಂದ ಜೀವ ಹಾನಿಯಾಗುವ ಸಾಧ್ಯತೆ ಹೆಚ್ಚಿದೆ ಆದ್ದರಿಂದ 40 ವರ್ಷ ದಾಟಿದ ಮಹಿಳೆಯರು ಯಾವುದೇ ಹಿಂಜರಿಕೆಯಿಲ್ಲದೆ ಸ್ತನ ಮ್ಯಾಮೊಗ್ರಫ಼ಿ ಮಾಡಿಕೊಳ್ಳುವಂತೆ ಕರೆ ನೀಡಿದರು.
Health Tips ಶಿಬಿರಕ್ಕೆ ಚಾಲನೆ ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಮಾತನಾಡಿ ಮಹಿಳೆಯರಿಗೆ ಮಾರಕವಾಗಿರುವ ಸ್ತನ ಕ್ಯಾನ್ಸರ್ ಬಗ್ಗೆ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ನಾರಾಯಣ ಹೃದಯಾಲಯ ಸಂಸ್ಥೆ ಕಾರ್ಯ ವೈಖರಿ ಶ್ಲಾಘನೀಯವಾಗಿದ್ದು ಮಹಿಳೆಯರು ಆರೋಗ್ಯದ ದೃಷ್ಟಿಯಿಂದ ಯಾವುದೇ ಅಳುಕು ತೋರದೇ ಪರೀಕ್ಷಿಸಿಕೊಳ್ಳಬೇಕಾಗಿದೆ ಎಂದರು.