Thursday, August 13, 2026
Thursday, August 13, 2026

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ನ. 15ರವರೆಗೆ ವಿಸ್ತರಣೆ

Date:

Kuvempu University ಕುವೆಂಪು ವಿಶ್ವವಿದ್ಯಾಲಯವು 2023-24ನೇ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ್ದ ಕೊನೆಯ ದಿನಾಂಕವನ್ನು ನವೆಂಬರ್ 15ಕ್ಕೆ ವಿಸ್ತರಿಸಿದೆ.

ವಿವಿಯು ಜ್ಞಾನಸಹ್ಯಾದ್ರಿ ಕ್ಯಾಂಪಸ್, ತನ್ನ ವ್ಯಾಪ್ತಿಯ ಎಲ್ಲ ಪಿಜಿ ಸೆಂಟರ್‌ಗಳು ಹಾಗೂ ಕಾಲೇಜುಗಳಲ್ಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಲು ಯು.ಯು.ಸಿ.ಎಂ.ಎಸ್. ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಅಹ್ವಾನಿಸಿತ್ತು.

ಈ ಮೊದಲು ಅರ್ಜಿ ಸಲ್ಲಿಕೆಗೆ ನವೆಂಬರ್ 05ರಂದು ಕೊನೆಯ ದಿನಾಂಕವಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸಲು ನವೆಂಬರ್ 15 ಅನ್ನು ಕೊನೆಯ ದಿನಾಂಕವೆಂದು ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ.

Kuvempu University ಹೊಸ ವೇಳಾಪಟ್ಟಿ ಅನ್ವಯ ನ. 23ರಂದು ಅರ್ಜಿ ಸಲ್ಲಿಸಿದವರ ವಿಷಯವಾರು ಮೆರಿಟ್ ಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ ಹಾಗೂ ನ. 27-29 ರ ವರೆಗೆ ಪ್ರವೇಶಾತಿ ಕೌನ್ಸೆಲಿಂಗ್ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...