Sunday, December 14, 2025
Sunday, December 14, 2025

Rotary Shimoga East ಸುರಕ್ಷಿತ ವಾಹನ ಚಾಲನೆ ಪ್ರತಿಯೊಬ್ಬರ ಜವಾಬ್ದಾರಿ

Date:

Rotary Shimoga East ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆ ಹೆಚ್ಚಿದಂತೆ ವಾಹನಗಳ ಸಂಖ್ಯೆಯು ಹೆಚ್ಚುತ್ತಿದೆ. ವಾಹನಗಳನ್ನು ಸರಿಯಾದ ರೀತಿ ಚಾಲನೆ ಮಾಡದಿರುವುದು ರಸ್ತೆ ಅಪಘಾತಗಳಿಗೆ ಹೆಚ್ಚು ಕಾರಣವಾಗಿದೆ. ಸುರಕ್ಷಿತ ವಾಹನ ಚಾಲನೆಯು ಪ್ರತಿಯೊಬ್ಬರ ಜವಾಬ್ದಾರಿ ಎಂದು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಶಿವಮೊಗ್ಗ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ವಾಹನ ಚಾಲನೆ ಬಗ್ಗೆ ಜಾಗೃತಿ ಮೂಡಿಸುವ ನಾಮಫಲಕ ಉದ್ಘಾಟಿಸಿ ಮಾತನಾಡಿ, ಸುರಕ್ಷಿತ ವಾಹನ ಚಾಲನೆ ಮಾಡುವುದರಿಂದ ಅಪಘಾತ ಪ್ರಕರಣಗಳನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.

ರಸ್ತೆಯಲ್ಲಿ ಬೇಕಾಬಿಟ್ಟಿ ಚಾಲನೆ ಮಾಡುವುದು, ಮದ್ಯಪಾನ ಸೇವಿಸಿ ಚಾಲನೆ ಮಾಡುವುದು. ತರಬೇತಿ ಹಾಗೂ ಪರವಾನಿಗೆ ಇಲ್ಲದೆ ಚಾಲನೆ ಮಾಡುವುದು ರಸ್ತೆ ಅಪಘಾತಕ್ಕೆ ಕಾರಣವಾಗಿದೆ. ರೋಟರಿ ಜಿಲ್ಲಾ ಸಂಸ್ಥೆಯು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷಿತ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಸಂಚಾರಿ ಪೊಲೀಸ್ ಸಹಾಯದಿಂದ ಹಾಗೂ ಪ್ರಮುಖ ಸ್ಥಳಗಳಲ್ಲಿ ನಾಮಫಲಕ ಅಳವಡಿಸುವುದರ ಮುಖಾಂತರ ಜಾಗೃತಿ ನಡೆಸಲಾಗುತ್ತಿದೆ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯವರು ಒಳ್ಳೆಯ ಸ್ಥಳದಲ್ಲಿ ಜಾಗೃತಿ ಮೂಡಿಸುವ ರೇಡಿಯಮ್ ಇರುವ ದೊಡ್ಡ ನಾಮಫಲಕವನ್ನು ಅಳವಡಿಸುತ್ತಿರುವುದು ತುಂಬಾ ಸಂತೋಷವಾಗಿದೆ. ನಾಮಫಲಕವನ್ನು ನೆಪ್ಚೂನ್ ಆಟೋ ವರ್ಕ್ ಸಹಕಾರದಲ್ಲಿ ಅಳವಡಿಸುತ್ತಿರುವುದು ತುಂಬಾ ಸಂತೋಷ. ಸಾರ್ವಜನಿಕರು ಕಡ್ಡಾಯವಾಗಿ ರಸ್ತೆ ನಿಯಮಗಳನ್ನು ಪಾಲಿಸಬೇಕು. ಚಾಲನೆ ಮಾಡುವಾಗ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಕಾರ್ ಗಳಲ್ಲಿ ಸೀಟ್ ಬೆಲ್ಟ್ ಗಳನ್ನು ಅಳವಡಿಸಿಕೊಂಡು ಚಾಲನೆ ಮಾಡಬೇಕು ಎಂದರು.

Rotary Shimoga East ಇದೇ ಸಂದರ್ಭದಲ್ಲಿ ಸಹಾಯಕ ಗವರ್ನರ್ ರವಿ ಕೊಟೋಜಿ ಮಾತನಾಡಿ, ಈ ವರ್ಷ ರೋಟರಿಯ ಜಿಲ್ಲಾ ಯೋಜನೆಗಳಲ್ಲಿ ಪ್ರಮುಖವಾದ ಒಂದು ಯೋಜನೆ ರಸ್ತೆ ಸುರಕ್ಷತೆ. ಈಗಾಗಲೇ ಎಲ್ಲಾ ರೋಟರಿ ಕ್ಲಬ್ ಗಳಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಮುಂಬರುವ ದಿನಗಳಲ್ಲಿ ರಸ್ತೆ ಸುರಕ್ಷತೆಯ ನಾಮಫಲಕಗಳನ್ನು ಬೇರೆ ಬೇರೆ ಪ್ರಮುಖ ಸ್ಥಳಗಳಲ್ಲಿ ಅಳವಡಿಸಲಾಗುವುದು. ರಸ್ತೆ ಸುರಕ್ಷತೆಯ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಜೋನಲ್ ಲೆಫ್ಟಿನೆಂಟ್ ಧರ್ಮೇಂದ್ರ ಸಿಂಗ್ ಬಂಟಿ ಮಾತನಾಡಿದರು. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ ವಿಜಯಕುಮಾರ್, ವಸಂತ ಹೋಬಳಿದಾರ್, ವಲಯ ತರಬೇತುದಾರ ಡಾ. ಗುಡದಪ್ಪ ಕಸಬಿ, ಶ್ರೀಕಾಂತ್ ಮಹೇಶ್, ಕಾರ್ಯದರ್ಶಿ ಕಿಶೋರ್ ಕುಮಾರ್, ನಿರ್ದೇಶಕ ಸಿ ಕೆ ವಿಜಯಕುಮಾರ್, ಸಂತೋಷ್, ಕುಮಾರಸ್ವಾಮಿ, ಮಂಜುನಾಥ್, ದಿವ್ಯ ಪ್ರವೀಣ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...