Shimoga District Chamber of Commerce & Industry ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂ.ಡಿ ಹಳ್ಳಿ ನಿರ್ದೇಶನದ ತನುಜಾ ಚಲನಚಿತ್ರವು ರಾಜಾದ್ಯಂತ ಬಿಡುಗಡೆಯಾಗಿ ಯಶಸ್ವಿಯಾಗಿದೆ. ವಿಧ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಆಗಿರುವ ಚಿತ್ರವು ಈಗಾಗಲೇ ರಾಜ್ಯದ ವಿವಿಧ ಮಠಾಧೀಶರು, ಶಿಕ್ಷಣ ತಜ್ಞರು, ಚಿಂತಕರು, ವಿಶ್ವವಿದ್ಯಾಲಯಗಳ ಕುಲಪತಿಗಳು, 300ಕ್ಕೂ ಹೆಚ್ಚು ವಿಧ್ಯಾಸಂಸ್ಥೆಗಳಲ್ಲಿ ಲಕ್ಷಕ್ಕೂ ಹೆಚ್ಚು ವಿಧ್ಯಾರ್ಥಿಗಳು ಸಿನಿಮಾ ವೀಕ್ಷಿಸಿ ಪ್ರಶಂಸಿಸಿದ್ದಾರೆ.
ಪ್ರಸ್ತುತ ಈ ಸಿನಿಮಾವು ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಸ್ಪೂರ್ತಿಯ ಸೆಲೆಯಾಗಲು ಸಜ್ಜಾಗಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗದ ಪ್ರತಿಷ್ಟಿತ “ನನ್ನ ಕನಸಿನ ಶಿವಮೊಗ್ಗ” ವತಿಯಿಂದ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವಲ್ಲಿ ಅವಿರತ ಶ್ರಮಿಸುತ್ತಿರುವ ತನುಜಾ ಚಿತ್ರ ತಂಡಕ್ಕೆ ಪ್ರೋತ್ಸಾಹ ಸಿಕ್ಕಿದೆ.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರೇರಣೆ ಒದಗಿಸುವ ಸಿನಿಮಾಗಳನ್ನು ಎಲ್ಲ ವಿದ್ಯಾರ್ಥಿಗಳು ವೀಕ್ಷಣೆ ಮಾಡುವಂತೆ ಅವಕಾಶ ಕಲ್ಪಿಸಬೇಕು. ಯುವ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಲು ಸ್ಫೂರ್ತಿ ದೊರಕುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಜೆ.ಆರ್ ವಾಸುದೇವ್, ಸಹಕಾರ್ಯದರ್ಶಿ ಜಿ.ವಿಜಯ್ Shimoga District Chamber of Commerce & Industry ಕುಮಾರ್, ಬಸವರಾಜು ಮತ್ತು ಜೀವನ್ ಚಿತ್ರದ ನಿರ್ದೇಶಕರಿಗೆ ಈ ಸಂಧರ್ಭದಲ್ಲಿ ಸನ್ಮಾನಿಸಿದರು.
Shimoga District Chamber of Commerce & Industry ರಾಜ್ಯ ಪ್ರಶಸ್ತಿ ವಿಜೇತ ಹರೀಶ್‌ಗೆ ಸನ್ಮಾನ
Date: