Saturday, December 6, 2025
Saturday, December 6, 2025

Siddaramaiah ಗ್ರಾಮ ಸ್ವರಾಜ್ಯ ಗಾಂಧಿ ಅವರ ಕನಸು – ಸಿ ಎಂ ಸಿದ್ದರಾಮಯ್ಯ

Date:

Siddaramaiah ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ “ಸೇವಾದಳ ಶತಮಾನೋತ್ಸವ ಮತ್ತು ರಾಜ್ಯ ಮಟ್ಟದ ಸಮ್ಮೇಳನ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ನಂತರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,
ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ. ಕಾಂಗ್ರೆಸ್ ಪಕ್ಷ ಮತ್ತು ಸೇವಾದಳ ಮಾತ್ರ ಸಾಮಾಜಿಕ ನ್ಯಾಯ, ಹೋರಾಟ, ದೇಶದ ಸಮಗ್ರತೆ ಬಗ್ಗೆ ನಂಬಿಕೆ ಇಟ್ಟಕೊಂಡು ದೇಶವನ್ನು, ಸಮಾಜವನ್ನು ಬೆಸೆಯುವ ಕೆಲಸ ಮಾಡುತ್ತಿದೆ.
ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡ ಚರಿತ್ರೆಯಾಗಲಿ, ಇತಿಹಾಸವಾಗಲಿ ಇಲ್ಲ. ಸೇವಾದಳ ತ್ಯಾಗ ಬಲಿದಾನಗಳ ಮೂಲಕ‌ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿತು.
ಗ್ರಾಮ ಸ್ವರಾಜ್ಯ ಮಹಾತ್ಮ ಗಾಂಧಿ ಅವರ ಕನಸು. ನೆಹರೂ ಮತ್ತು ಇಂದಿರಾಗಾಂಧಿ ಅವರ ಕಾಲದಲ್ಲಿ ಗ್ರಾಮಗಳ ಪ್ರಗತಿಗೆ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡರು. ನಮ್ಮ ಸರ್ಕಾರ ಕೂಡ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಚುನಾವಣೆಯಲ್ಲಿ ನಾವು ಕೊಟ್ಟ ಎಲ್ಲಾ ಭರವಸೆಗಳನ್ನೂ ಹಿಂದಿನ ಬಾರಿಯೂ ಈಡೇರಿಸಿದ್ದೇವೆ. ಈ ಬಾರಿಯೂ ಈಡೇರಿಸುತ್ತಲೇ ಇದ್ದೇವೆ ಎಂದರು.

Siddaramaiah ಸೇವಾದಳ ಕಾರ್ಯಕರ್ತರ ನಿಸ್ವಾರ್ಥ ಸೇವೆಯಿಂದ, ಪ್ರಾಮಾಣಿಕ ಹೋರಾಟದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಬುಡಸಮೇತ ಕಿತ್ತೊಗೆದು ಭಾರತವನ್ನು ಕಾಪಾಡಿಕೊಳ್ಳುವ ರಾಹುಲ್ ಗಾಂಧಿ ಅವರ ಗುರಿಯನ್ನು ಸಾಧಿಸಬೇಕು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...