Wednesday, June 25, 2025
Wednesday, June 25, 2025

Onake Obavva Jayanti ವೀರರಾಣಿ ಒನಕೆ ಓಬವ್ವ ಜಯಂತಿ

Date:

Onake Obavva Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನ.11 ರಂದು ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿಯನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪ ನೆರೆವೇರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಿ.ಸುಧಾಕರ್ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರ ಶಾಸಕರಾದ ಎಸ್.ಎಸ್ ಚನ್ನಬಸಪ್ಪ ವಹಿಸಲಿದ್ದಾರೆ. ಸಂಸದರು, ವಿಧಾನ ಸಭಾ/ವಿಧಾನ ಪರಿಷತ್ ಶಾಸಕರು, ಮಹಾನಗರಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕುವೆಂಪು Onake Obavva Jayanti ವಿಶ್ವವಿದ್ಯಾಲಯದ ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ನೆಲ್ಲಿಕಟ್ಟೆ.ಎಸ್.ಸಿದ್ದೇಶ್ ಇವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...