Monday, February 2, 2026
Monday, February 2, 2026

Rotary Shivamogga ನ. 18, 19ಕ್ಕೆ ರೋಟರಿ ವಲಯ ಮಟ್ಟದ ಕ್ರೀಡಾಕೂಟ

Date:

Rotary Shivamogga ನವೆಂಬರ್ 18 ಮತ್ತು 19 ರಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಮುಂದಾಳತ್ವದಲ್ಲಿ ರೋಟರಿ ವಲಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ರೋಟರಿ ವಲಯ 11ರ ಸಹಾಯಕ ಗವರ್ನರ್ ರವಿ ಕೋಟೋಜಿ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ರೋಟರಿ ಸೇವಾ ಸಂಸ್ಥೆ ಆಗಿದ್ದು, ರೋಟರಿ ಸದಸ್ಯರಿಗೆ ಶಿವಮೊಗ್ಗ ನಗರದಲ್ಲಿ ವಲಯ ಮಟ್ಟದ ಕ್ರೀಡಾಕೂಟ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಅಧ್ಯಕ್ಷ ಗಣೇಶ್ ಎಂ.ಅಂಗಡಿ ಮಾತನಾಡಿ, ನವೆಂಬರ್ 18 ರಂದು ನೆಹರು ಕ್ರೀಡಾಂಗಣದಲ್ಲಿ ಶೆಟಲ್ ಬ್ಯಾಡ್ಮಿಂಟನ್, ಚೆಸ್, ಕೇರಂ, ಟೇಬಲ್ ಟೆನ್ನಿಸ್ ನಡೆಯಲಿದೆ. ನವೆಂಬರ್ 19ರಂದು ಕೃಷಿ ಕಾಲೇಜಿನ ಕ್ರೀಡಾಂಗಣದಲ್ಲಿ ಕ್ರಿಕೆಟ್ ವಾಲಿಬಾಲ್, ಥ್ರೋಬಾಲ್, ಟಗ್ ಆಫ್ ವಾರ್ ನಡೆಯಲಿದೆ. ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಉಪಾಧ್ಯಕ್ಷ ಜಿ.ವಿಜಯ್‌ಕುಮಾರ್ ಮಾತನಾಡಿ, ಕ್ರೀಡಾಕೂಟದಲ್ಲಿ ಸದಸ್ಯರು ಒಟ್ಟುಗೂಡಿಸಲು ಸಹಕಾರಿಯಾಗುತ್ತದೆ. ವಿಜೇತರಾದವರು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿದೆ. ಕ್ರೀಡಾಕೂಟದಲ್ಲಿ 15ಕ್ಕಿಂತ ಹೆಚ್ಚಿನ ಕ್ಲಬ್‌ಗಳು 300ಕ್ಕೂ ಹೆಚ್ಚು ಸದಸ್ಯರು ಭಾಗವಹಿಸುವರು ಎಂದು ತಿಳಿಸಿದರು.

Rotary Shivamogga ವಲಯ 10ರ ಸಹಾಯಕ ಗವರ್ನರ್ ರಾಜೇಂದ್ರ ಪ್ರಸಾದ್, ವಲಯ ಸೇನಾನಿ ಧರ್ಮೇಂದ್ರ ಸಿಂಗ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ, ಕಾರ್ಯದರ್ಶಿ ಕಿಶೋರ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...