Pratibha Karanji ಪ್ರತಿಯೊಂದು ಮಗುವಿನಲ್ಲೂ ಒಂದಲ್ಲೊಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಗೆ ಸಾಧಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಹೇಳಿದರು.
ಚಿಕ್ಕಮಗಳೂರು ತಾಲ್ಲೂಕಿನ ದೇವಗೊಂಡನಹಳ್ಳಿ ಗ್ರಾಮದಲ್ಲಿ ಜಿ.ಪಂ., ತಾ.ಪಂ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗ ದಲ್ಲಿ ಏರ್ಪಡಿಸಿದ್ದ ಕಳಸಾಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರಿಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಾಕಾರದ ಪ್ರತಿಭೆ ಯನ್ನು ತೋರಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದರು.
ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ. ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಆ ನಿಟ್ಟಿನಲ್ಲಿ ಪೋಷಕರು ಹಾಗೂ ಶಾಲಾಶಿಕ್ಷಕರು ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಉನ್ನತ ಮಟ್ಟದಲ್ಲಿ ಬೆಳವಣ ಗೆ ಹೊಂದಲು ಸಾಧ್ಯ ಎಂದು ಹೇಳಿದರು.
Pratibha Karanji ಕಳಸಾಪುರ ಗ್ರಾ.ಪಂ. ಅಧ್ಯಕ್ಷ ನಾಗೇಗೌಡ ಮಾತನಾಡಿ ದೇಶಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮಕ್ಕಳಿಗೆ ತಿಳಿಸಿ ಪ್ರೋತ್ಸಾಹಿಸಬೇಕು ಎಂದ ಅವರು ಆಧುನಿಕ ಯುಗದಲ್ಲಿ ಸ್ಪರ್ಧೆ ಎದುರಿಸಿ ಬದುಕು ಕಟ್ಟಿಕೊಳ್ಳುವುದರ ಜತೆಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳುವುದು ಅಗತ್ಯ ಎಂದರು.
ಶಿಕ್ಷಣ ಸಂಯೋಜಕ ಎಸ್.ಬಿ.ಮಧು ಪ್ರಾಸ್ತಾವಿಕವಾಗಿ ಮಾತನಾಡಿ ಏಕಾಪಾತ್ರಾಭಿನಯ, ಜನಪದ ನೃತ್ಯ, ಸಾಮಾಜಿಕ ಮತ್ತು ಪೌರಾಣ ಕ ನಾಟಕಗಳು ಅನೇಕ ಸಾಂಸ್ಕೃತಿಕ ಚಟುವಟಿಕೆಗಳು ಪ್ರತಿಭಾ ಕಾರಂಜಿ ವ್ಯಾಪ್ತಿಯಲ್ಲಿ ಬರುವುದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಕಲಾಭಿರುಚಿಯ ಸಾಮರ್ಥ್ಯವನ್ನು ಸಾಬೀತಿಪಡಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ತಿಳಿಸಿದರು.
ಗ್ರಾಮದ ಹಿರಿಯ ಮುಖಂಡ ಚಂದ್ರೇಗೌಡ ಮಾತನಾಡಿ ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ, ಪೋಷಕರಿಗಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ. ಮಕ್ಕಳ ಪ್ರತಿಭೆಯನ್ನು ತಂದೆ ತಾಯಿಗಳು ಹತ್ತಿರದಿಂದ ಕಣ್ಮುಂಬಿಕೊಳ್ಳುವ ವೇದಿಕೆಯಾಗಿದೆ ಎಂದರು.
ಇದೇ ವೇಳೆ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಮಂಜುಳಾ ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಳಸಾಪುರ ಸದಸ್ಯರುಗಳಾದ ಯೋಗೀಶ್, ಗೌರಮ್ಮ, ಲಕ್ಷö್ಮಮ್ಮ, ಹರ್ಷದ್, ಶ್ವೇತ, ಕಾಂತರಾಜ್, ಮಧುಸೂದನ್, ಶಾಲೆಯ ಮುಖ್ಯಶಿಕ್ಷಕಿ ಮಂಜುಳಾ, ಶಿಕ್ಷಕರಾದ ಎಸ್.ವೈ.ಮಂ ಜುನಾಥ್, ಬಿ.ಟಿ.ಲಕ್ಷ್ಮಣ್, ಗ್ರಾಮಸ್ಥರಾದ ಕೆಂಗೇಗೌಡ, ಸಗನೇಗೌಡ, ದಾನಿಗಳು, ಸ್ತ್ರೀಶಕ್ತಿ ಯುವಕ ಸಂಘದವರು ಹಾಜರಿದ್ದರು.