Deepavali Festival ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಭಾನುವಾರ ಮಲೆನಾಡಿನ ವಿಶಿಷ್ಟ ಕಲೆಯಾದ ಅಂಟಿಗೆ ಪಂಟಿಗೆಯ ಜ್ಯೋತಿಯು ನಗರದ ವಿವಿಧ ಬಡಾವಣೆಗಳ ಮನೆಗಳಿಗೆ ತೆರಳಿ ದೀಪ ನೀಡಿ ಅಂಟಿಕೆ ಪಂಟಿಕೆ ಪದಗಳ ಮೂಲಕ ಶುಭ ಹಾರೈಸಿತು.
ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಸ್ಥಾನದಿಂದ ಸಂಜೆ ಹೊರಟ ಅಂಟಿಕೆ ಪಂಟಿಕೆಯ ಎರಡು ತಂಡಗಳನ್ನು ನಗರದ ವಿವಿಧ ಬಡಾವಣೆಗಳ ನಿವಾಸಿಗಳು ಸಂಭ್ರಮದಿಂದ ಬರಮಾಡಿಕೊಂಡರು. ನಗರದ ಸುಮಾರು 80 ಕ್ಕು ಹೆಚ್ಚು ಮೆನೆಗಳಿಗೆ ಅಂಟಿಕೆ ಪಂಟಿಕೆ ತಂಡ ಬೆಳಗಿನ ಜಾವದವರೆಗೂ ತೆರಳಿತು.
‘ದೀಪೋಳಿ ಎನ್ನಿರಣ್ಣಾ ..ಈ ಊರ ದೇವ್ರಿಗೆ’ , ‘ಮಣ್ಣಲ್ಲಿ ಹುಟ್ಟಿದೆ, ಮಣ್ಣಲ್ಲಿ ಬೆಳೆದೆ, ಎಣ್ಣೆಲಿ ಕಣ್ನಬಿಟ್ಟಿದೆ, ಜಗಜ್ಯೋತಿ ನಾ ಸತ್ಯದಿಂದ ಉರಿವೆ ಜಗಜ್ಯೋತಿ’ ಎನ್ನುತ್ತಾ ಶುಭಹಾರೈಸಿದರು. ಅಂಟಿಕೆ ಪಂಟಿಕೆಯ ತಂಡ ತರುವ ಜ್ಯೋತಿ ಮನೆ ಪ್ರವೇಶಿಸಿದಾಗ ಮನೆಯವರು ದೀಪಕ್ಕೆ ಎಣ್ಣೆ ಎರೆದು ಪೂಜೆ ಸಲ್ಲಿಸುತ್ತಾರೆ. ಹೀಗೆ ದೀಪ ಬೆಳಗಿದ ಮನೆಯಲ್ಲಿ ಮುಂದಿನ ವರ್ಷದವರೆಗೆ ಯಾವುದೇ ಕಷ್ಟಗಳು ಬರುವುದಿಲ್ಲ ಎಂಬ ನಂಬಿಕೆಯಿದೆ.
Deepavali Festival ಕಾರ್ಯಕ್ರಮವನ್ನು ಪೋಲೀಸ್ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಉದ್ಘಾಟಿಸಿ ತಂಡದೊಂದಿಗೆ ಹೆಜ್ಜೆ ಹಾಕಿದರು.