Thursday, April 24, 2025
Thursday, April 24, 2025

Shikaripura Animal Food Unit ಮೆಕ್ಕೆಜೋಳ ಖರೀದಿಗೆ ನೊಂದಣಿ ಪ್ರಕ್ರಿಯೆ ಆರಂಭ

Date:

Shikaripura Animal Food Unit ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್‌ಗೆ ರೂ.2250/- ರ ಬೆಲೆಯಲ್ಲಿ ಖರೀದಿಸಲು ಆರಂಭಿಸಿದ್ದು, ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೊಂದಾಯಿಸಿಕೊಳ್ಳಬಹುದಾಗಿದೆ.

ಕಹಾಮ ಶಿಕಾರಿಪುರ ಪಶು ಆಹಾರ ಘಟಕಕ್ಕೆ ಅವಶ್ಯವಿರುವ 30,000 ಮೆ.ಟನ್ ಮೆಕ್ಕೆಜೋಳವನ್ನು ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಪ್ರದೇಶದ ರೈತರುಗಳಿಂದ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ಧಪಡಿಸಿರುವ ಫ್ರೂಟ್ಸ್ ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಠಾನಕ್ಕೆ ತರಲಾಗುವುದು.

Shikaripura Animal Food Unit ಪ್ರತಿ ಒಬ್ಬ ರೈತರಿಂದ ಗರಿಷ್ಠ 1000 ಕ್ವಿಂಟಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ರೈತರೇ ನೇರವಾಗಿ ಉತ್ತಮ ಗುಣಮಟ್ಟದ ಮೆಕ್ಕೆಜೋಳವನ್ನು ತಲಾ ಐವತ್ತು ಕೆ.ಜಿ ತೂಕದಂತೆ ಉತ್ತಮ ಗುಣಮಟ್ಟದ ಗೋಣ ಚೀಲಗಳಲ್ಲಿ ಸರಬರಾಜು ಮಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣ ಸಂಖ್ಯೆ : 9606012571 ಅನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ಕ.ಹಾ.ಮ ಪಶು ಆಹಾರ ಘಟಕದವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...