Saturday, November 23, 2024
Saturday, November 23, 2024

Siddaramaiah ರೈತ ಸಾಧಕರ ಸಾಧನೆಗಳು ರೈತರಿಗೆ ಮಾದರಿಯಾಗಬೇಕು- ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳ ಉದ್ಘಾಟಿಸಿ ಕೃಷಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು. ಇದಾಗಬೇಕಾದರೆ ಹೊಸ ತಳಿಗಳು, ಹೊಸ ಔಷಧ, ಮಣ್ಣಿನ ಫಲವತ್ತತೆ, ತಂತ್ರಜ್ಞಾನ, ರೈತರಿಗೆ ನ್ಯಾಯಯುತ ಬೆಲೆ, ಆಹಾರ ಸಂಗ್ರಹಣೆಗೆ ಗೋದಾಮುಗಳು ಇದ್ದಾಗ ಮಾತ್ರ ಸುಸ್ಥಿರವಾದ ಕೃಷಿ ಬೆಳವಣಿಗೆ ಆಗುತ್ತದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ಕೃಷಿವಿಶ್ವವಿದ್ಯಾಲಯ. 6 ದಶಕಗಳಿಂದ ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಕೃಷಿಯಲ್ಲಿ ಆಗಿರುವ ಆವಿಷ್ಕಾರ ಹಾಗೂ ಬೆಳವಣಿಗೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಾ ಬಂದಿದೆ. ಕೃಷಿಕರಿಗೆ ವಿಶ್ವವಿದ್ಯಾಲಯದಲ್ಲಿ ಆಗುವ ತಂತ್ರಜ್ಞಾನದ ಅಭಿವೃದ್ಧಿ, ಹೊಸ ತಳಿಗಳು, ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವುದು ಮುಂತಾದವನ್ನು ತಿಳಿಸುವ ಕೆಲಸವನ್ನು ಮಾಡಬೇಕು. ಕೃಷಿ ವಿದ್ಯಾಲಯ ಕೇವಲ ಕೃಷಿ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಲ್ಲ. ಕೃಷಿ ವಿದ್ಯಾರ್ಥಿಗಳನ್ನು ತಯಾರಿಸುವ ಜೊತೆಗೆ ಸಂಶೋಧನೆಗಳಿಗೆ ಒತ್ತು ನೀಡಬೇಕು ಎಂದು ಹೇಳಿದರು.

ನಮ್ಮ ರಾಜ್ಯ ಇಡೀ ದೇಶದಲ್ಲಿ ರಾಜಸ್ತಾನವನ್ನು ಬಿಟ್ಟರೆ ಹೆಚ್ಚು ಒಣ ಭೂಮಿ ಇರುವ ರಾಜ್ಯ. ಹೆಚ್ಚು ರೈತರು ಕೃಷಿಯನ್ನು ಅವಲಂಬಿಸಿದ್ದಾರೆ. ನಾವು ಎಲ್ಲಾ ರೈತರೂ ಕೃಷಿಯನ್ನು ಬಿಡದಂತೆ ಮಾಡಬೇಕಾದರೆ ಕೃಷಿ ಲಾಭದಾಯಕವಾಗಬೇಕು. ಕೃಷಿ ಲಾಭದಾಯಕವಾಗದೇ ಹೋದರೆ ಬಹಳಷ್ಟು ಜನ ರೈತರು ಕೃಷಿಯನ್ನು ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕೃಷಿ ಮಾಡಿ ಬದುಕಬಹುದು ಎಂಬ ಪರಿಸ್ಥಿತಿ ನಿರ್ಮಿಸಲು ಕೃಷಿ ವಿವಿಗಳಲ್ಲಿ ಕೆಲಸ ಮಾಡುವ ವಿಜ್ಞಾನಿಗಳು, ಅಧ್ಯಾಪಕರು ಹೆಚ್ಚು ಒತ್ತು ನೀಡಬೇಕು.
ಕೃಷಿ ವಿವಿ 5 ಹೊಸ ತಳಿಗಳನ್ನು ಬಿಡುಗಡೆ ಮಾಡಿರುವುದು ಸಂತೋಷ. ತಳಿಗಳು ನೀರು ಕಡಿಮೆಯಿದ್ದಾಗಲೂ ಬೆಳೆಯಲು ಸಾಧ್ಯವಿರಬೇಕು. ರೋಗನಿರೋಧಕಕ ಶಕ್ತಿ ಇರುವಂತೆ ಆಗಬೇಕು. ಬಹಳಷ್ಟು ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆ, ಬೆಳೆ ಇಲ್ಲದೇ, ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಕಷ್ಟದಲ್ಲಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಬರಗಾಲಕ್ಕೆ ತುತ್ತಾಗುವ ಸ್ಥಿತಿ ಇದೆ. ಕೃಷಿ ಇದ್ದಲ್ಲೆಲ್ಲಾ ಬರಗಾಲ ಉಂಟಾಗಿದೆ. ಮೊದಲು 4-5 ವರ್ಷಗಳಿಗೊಮ್ಮೆ ಬರಗಾಲ ಬರುತ್ತಿತ್ತು. ಕೆಲವೊಮ್ಮೆ ಭೀಕರ ಬರಗಾಲ ಬರುತ್ತದೆ. ಈ ಬಾರಿ 223 ತಾಲ್ಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಲಾಗಿದೆ. ಹೆಚ್ಚು ಕಡಿಮೆ ಶೇ 90 ರಷ್ಟು ಬರಗಾಲ ಉಂಟಾಗಿದೆ. ಸರ್ಕಾರ ಸಹಾಯಧನ ಕೊಡಬಹುದು, ನೀರು ಕೊಡಬಹುದು ಆದರೆ ಪೂರ್ಣ ಬೆಳೆಯ ನಷ್ಟವನ್ನು ತುಂಬಿಕೊಡಲು ಸಾಧ್ಯವಾಗುವುದಿಲ್ಲ. ನಷ್ಟ ಭರಿಸುತ್ತೇವೆ ಎಂದರೆ ಅದು ರೈತರನ್ನು ತಪ್ಪು ದಾರಿಗೆ ಎಳೆದಂತಾಗುತ್ತದೆ ಎಂದು ತಿಳಿಸಿದರು.

ಸುಮಾರು 33 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯ ಪ್ರಕಾರ ಸರ್ಕಾರ 17,900 ಕೋಟಿ ರೂ.ಗಳ ಪರಿಹಾರ ಕೇಳಿದ್ದೇವೆ. 16 ಸಾವಿರ ಕೋಟಿಯಷ್ಟು ರೈತರಿಗೆ ನಷ್ಟವಾಗುತ್ತದೆ. ಬೆಳೆವಿಮೆ ಮಾಡಿದ್ದರೂ ಪೂರ್ಣ ನಷ್ಟ ಭರಿಸಲು ಸಾಧ್ಯವಿಲ್ಲ. ಇಂಥ ಪರಿಸ್ಥಿತಿಯಲ್ಲಿ ರೈತರನ್ನು ಕಾಪಾಡುವುದು ಸರ್ಕಾರದ ಹಾಗೂ ವಿವಿಗಳ ಜವಾಬ್ದಾರಿ. ಕೃಷಿ ವಿವಿಗಳ ಪಾತ್ರ ಮಹತ್ವದ್ದು. ದೇಶದಲ್ಲಿ ಕೃಷಿ ಕ್ಷೇತ್ರ್ರದ ಮೇಲೆ ಆಹಾರಕ್ಕಾಗಿ ಅವಲಂಬನೆಯಾಗಿರುತ್ತಾರೆ. ಅವರಿಗೆ ಆಹಾರದ ಉತ್ಪಾದನೆಯಾಗಬೇಕು.
ಕೃಷಿಯ ಹಿನ್ನಲೆಯಿಂದ ಬಂದ ನನಗೆ ರೈತರ ಕಷ್ಟ ತಿಳಿದಿದೆ. ರೈತರು ವರ್ಷಪೂರ್ತಿ ಜಮೀನಿನಲ್ಲಿ ದುಡಿಯುತ್ತಾರೆ. ಈ ಶ್ರಮಜೀವಿಗಳ ಜೀವನವನ್ನು ಹಸನುಗೊಳಿಸಲು, ಕೃಷಿ ವಿವಿಗಳು ಹೆಚ್ಚಿನ ಸಂಶೋಧನೆಯನ್ನು ಕೈಗೊಳ್ಳಬೇಕು. ವಿಶ್ವವಿದ್ಯಾಲಯದಲ್ಲಿ ಪದವೀಧರರನ್ನು ತಯಾರು ಮಾಡುವ ಜೊತೆಗೆ ಸಂಶೋಧನೆಗೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ಹೇಳಿದರು.

Siddaramaiah ಸಿರಿಧಾನ್ಯಗಳು, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳಿಗೆ ಆರೋಗ್ಯದೃಷ್ಟಿಯಿಂದ ಹೆಚ್ಚಿನ ಬೇಡಿಕೆ ಉಂಟಾಗಿದೆ. ಹೆಚ್ಚಿನ ಬೇಡಿಕೆ ಇರುವ ಸಿರಿಧಾನ್ಯಗಳನ್ನು ಬೆಳೆಸಲು ರೈತರಲ್ಲಿ ಜಾಗೃತಿ ಮೂಡಿಸಬೇಕು. ರೈತರ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ವ್ಯವಸ್ಥೆಯನ್ನು ಪೂರೈಸಬೇಕು. ನಮ್ಮ ಸರ್ಕಾರ ರೈತರಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತದೆ. ಕೃಷಿ ವಿವಿಗಳು ಹೊಸ ತಳಿಗಳು, ಹೊಸ ಸಂಶೋಧನೆಗಳನ್ನು ನಡೆಸಲು ಹೆಚ್ಚಿನ ಹಣವನ್ನೂ ಸರ್ಕಾರ ನೀಡಲು ಸಿದ್ಧವಿದೆ.
ನಮ್ಮ ಸರ್ಕಾರ ಕೃಷಿ ಭಾಗ್ಯ ಯೋಜನೆ ಪುನ: ಜಾರಿ ಮಾಡಿದೆ. ಹೊಸ ತಳಿಗಳನ್ನು ಬೆಳೆಯುವ ಮೂಲಕ ರೈತರಿಗೆ ಹೆಚ್ಚಿನ ಫಸಲು ದೊರೆಯುತ್ತದೆ. ಬಹುಬೆಳೆಗಳನ್ನು ಬೆಳೆಯುವ ಪ್ರವೃತ್ತಿಯನ್ನು ರೈತರು ಬೆಳೆಸಿಕೊಳ್ಳಬೇಕು. ಇಂದು ಪುರಸ್ಕೃತರಾಗಿರುವ ರೈತ ಸಾಧಕರ ಸಾಧನೆಗಳು ನಾಡಿನ ರೈತರಿಗೆ ಮಾದರಿಯಾಗಬೇಕು ಎಂದು ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...