Wednesday, September 16, 2026
Wednesday, September 16, 2026

Thirthahalli News ತೀರ್ಥಹಳ್ಳಿ ತಾಲ್ಲೂಕು ನಿಲುವಾನೆಯಲ್ಲಿ ಅಗ್ನಿ ಆಕಸ್ಮಿಕ

Date:

Thirthahalli News ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ನಂಟೂರು ಗ್ರಾಮದ ನಿಲುವಾನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ನಿಲುವಾನೆ ವಾಸಿ ಶ್ರೀನಿವಾಸ್ ಗೌಡ ಎಂಬುವವರ ಮನೆಯ ಕೊಟ್ಟಿಗೆಗೆ ಬೆಂಕಿ ತಗಲಿದ್ದು ಕೊಟ್ಟಿಗೆ ಮತ್ತು ಹುಲ್ಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕೊಟ್ಟಿಗೆಯಲ್ಲಿ ಬೆಂಕಿ ಕಂಡ ಕೂಡಲೇ ಮಾಲಿಕರಾದ ಶ್ರೀನಿವಾಸ್ ಅವರು ಕೊಟ್ಟಿಗೆಯಲ್ಲಿದ್ದ ಜಾನುವಾರುಗಳ ಹಗ್ಗ ತೆಗೆದು ಯಾವುದೇ ಪ್ರಾಣ ಹಾನಿಯಾಗದಂತೆ ಕಾಪಾಡಿದ್ದಾರೆ. ಬಳಿಕ ಗ್ರಾಮಸ್ಥರ ಸಹಾಯ ಪಡೆದು ಅಗ್ನಿ ನಂದಿಸಲು ಪ್ರಯತ್ನಿಸಿದ್ದಾರೆ. ನಂತರ ಅಗ್ನಿಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Thirthahalli News ಘಟನಾ ಸ್ಥಳದಲ್ಲಿ ರಾಘವೇಂದ್ರ ಕುಂದಾದ್ರಿ, ಪಿ ಡಿ ಓ ವಿನಯ್, ಬಿಳಿಗೆರೆ ಮಂಜುನಾಥ್ ಸ್ಥಳೀಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...