Thursday, June 18, 2026
Thursday, June 18, 2026

Department of Public Libraries ಸೊರಬದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ

Date:

Department of Public Libraries ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯ, ಶಿವಮೊಗ್ಗ ಇವರುಗಳ ಸಹಯೋಗದೊಂದಿಗೆ ನ.20 ರಂದು ಬೆಳಗ್ಗೆ 11ಕ್ಕೆ ಸೊರಬದ ರಂಗಮ0ದಿರದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ ಮತ್ತು ಸಿಬ್ಬಂದಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಿದೆ.

ಬೆಳಗ್ಗೆ 10ರಿಂದ 11 ರವರೆಗೆ ಸೊರಬದ ಶ್ರೀರಂಗಸಾಥಸ್ವಾಮಿ ದೇವಸ್ಥಾನದಿಂದ ರಂಗಮ0ದಿರದವರೆಗೆ “ಓದಿನಡೆಗೆ ನಮ್ಮ ನಡಿಗೆ” ಎಂಬ ಘೋಷವಾಕ್ಯದೊಂದಿಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಜಾಥಾ ಚಾಲನೆ, ಅಧ್ಯಕ್ಷತೆ, ಸಮಾರಂಭದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರಧಾನ ಮಾಡುವರು. ಪುಸ್ತಕ ಪ್ರದರ್ಶನ ಉದ್ಘಾಟನೆಯನ್ನು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ನೆರವೇರಿಸುವರು.

Department of Public Libraries ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಶಾಸಕರು, ವಿಧಾನ ಪರಿಷತ್ ಶಾಸಕರು ಪಾಲ್ಗೊಳ್ಳುವರು. ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಶಾ.ಶಿ.ಮತ್ತು ಸಾ.ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಸಾರ್ವಜನಿಕ ಗ್ರಂಥಲಯ ಇಲಾಖೆ ವಿಶ್ರಾಂತ ನಿರ್ದೇಶಕ ಟಿ. ಮಲ್ಲೇಶಪ್ಪ ಸೇರಿದಂತೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಹಿರಿಯ ಅಧಿಕಾರಿಗಳು, ಶಿವಮೊಗ್ಗ ಜಿಲ್ಲೆಯ ಎಲ್ಲಾ ಗೌರವಾನ್ವಿತ ಚುನಾಯಿತ ಜನಪ್ರತಿನಿಧಿಗಳು, ಸರ್ವ ಸದಸ್ಯರುಗಳು, ಪುರಸಭೆ ಸೊರಬ, ಹಾಗೂ ಜಿಲ್ಲಾ/ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...