Dalit Sangarsha Samiti ಕಡೂರು ತಾಲ್ಲೂಕು ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿ ನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಮಗ್ರ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ವಸತಿ ಶಾಲೆ ಪ್ರಾಂಶುಪಾಲರನ್ನು ಅಮಾನತುಪಡಿಸಿ ಶಿಸ್ತುಕ್ರಮ ಜರುಗಿಸಬೇಕು ಎಂದು ದಸಂಸ (ಪ್ರೋ.ಕೃಷ್ಣಪ್ಪ ಸ್ಥಾಪಿತ ಬಣ)ದ ಮುಖಂಡರುಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಈ ಸಂಬಂಧ ಅಪರ ಜಿಲ್ಲಾಧಿಕಾರಿ ನಾರಾಯಣಕನಕರೆಡ್ಡಿ ಅವರ ಮನವಿ ಸಲ್ಲಿಸಿದ ದಸಂಸ ಮುಖಂ ಡರುಗಳು ಪ್ರಕರಣದ ಸಮಗ್ರ ತನಿಖೆ ನಡೆಸುವ ಮೂಲಕ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಬಳಿಕ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಕೆಲಸ ಕೊಡಿಸುವುದಾಗಿ ಪುಸಲಾಯಿಸಿ ಅವರಿಗೆ ಮತ್ತು ಬರುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಸಂಬಂಧ ಆರೋಪಿಗಳಾದ ನರ್ಸ್, ವಸತಿಶಾಲೆ ಡಿ.ದರ್ಜೆ ನೌಕರ ಹಾಗೂ ಇನ್ನೋರ್ವ ವ್ಯಕ್ತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ವಸತಿ ಶಾಲೆಯಲ್ಲಿ ಘಟನೆ ನಡೆದರೂ ನಿರ್ಲಕ್ಷ್ಯ ವಹಿಸಿದ ಪ್ರಾಂಶುಪಾಲರ ವಿರುದ್ಧವೂ ಕ್ರಮ ಜರು ಗಿಸಬೇಕು ಎಂದು ಒತ್ತಾಯಿಸಿದರು.
ವಸತಿ ಶಾಲೆಯಲ್ಲಿ ಮೂರ್ನಾಲ್ಕು ತಿಂಗಳಿನಿಂದ ಈ ಕೃತ್ಯ ನಡೆಯುತ್ತಿದ್ದರೂ ಪ್ರಾಂಶುಪಾಲರು ಮೌನ ವಹಿಸಲಾಗಿದೆ. ಗ್ರಾಮಸ್ಥರ ಒತ್ತಾಯದ ಬಳಿಕ ಪೊಲೀಸರು ದೂರು ಸಲ್ಲಿಸಿದ್ದಾರೆ. ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗಳಿಗೆ ಶಿಸ್ತು, ಆರೋಗ್ಯ ಕ್ಷೇಮ ವಿಚಾರಿಸಬೇಕಾದ ಇವರು ಬೇಜವಾಬ್ದಾರಿಯಿಂದ ಕರ್ತವ್ಯ ಲೋಪವೆಸಗಿದ್ದಾರೆ ಎಂದು ದೂರಿದರು.
ಇದರಿಂದಾಗಿ ಹಲವು ಅನುಮಾನಗಳು ಕಾಡುತ್ತಿದ್ದು ಕಳೆದ ೧೨ ವರ್ಷದಿಂದ ಇಲ್ಲಿಯೇ ಸೇವೆ ಸಲ್ಲಿಸುತ್ತಿರುವ ಇವರನ್ನು ಸೇವೆಯಿಂದ ಅಮಾನತುಪಡಿಸಿ ಸಂಬಂಧಪಟ್ಟ ಇಲಾಖೆಯಿಂದ ಉನ್ನತಮಟ್ಟದ ಸಮಗ್ರ ತನಿಖೆ ನಡೆಸಿ ಸತ್ಯವನ್ನು ಹೊರತರಬೇಕು ಎಂದು ಆಗ್ರಹಿಸಿದರು.
Dalit Sangarsha Samiti ವಸತಿ ಶಾಲೆಯಲ್ಲಿ ನಡೆದ ಕೃತ್ಯದಿಂದಾಗಿ ವಿದ್ಯಾರ್ಥಿನಿಯರ ಅಧ್ಯಯನಕ್ಕೆ ತೊಡಕಾಗುತ್ತಿದ್ದು ಭಯ ಬೀತರಾಗಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡ ಬೇಕು ಇಲ್ಲವಾದಲ್ಲಿ ಸಂಘಟನೆ ವತಿಯಿಂದ ಉಗ್ರ ಪ್ರತಿಭಟನೆ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ದಸಂಸ ತಾಲ್ಲೂಕು ಸಂಘಟನಾ ಸಂಚಾಲಕ ಪ್ರಮೋದ್, ಸಂಘಟನಾ ಸಂಚಾಲಕ ಮಂಜುನಾಥ್, ಮುಖಂಡರಾದ ನಾಗರಾಜ್, ಕೃಷ್ಣಮೂರ್ತಿ ಮತ್ತಿತರರು ಇದ್ದರು.