Wednesday, September 16, 2026
Wednesday, September 16, 2026

Siddaramaiah ಸಾಧಿಸಿದ್ದು ಹಲವು.ಸಾಗಬೇಕಾದ ಹಾದಿ ಬಹುದೂರ ಇದೆ-ಸಿದ್ಧರಾಮಯ್ಯ

Date:

Siddaramaiah ಶಿಕ್ಷಣ ಪೂರ್ತಿಗೊಳಿಸಿದ ಪದವೀಧರ ಯುವಜನರಿಗೆ ಉದ್ಯೋಗ ಹುಡುಕಿಕೊಳ್ಳಲು ಅಗತ್ಯ ಸಮಯ ದೊರಕಬೇಕು ಮತ್ತು ಈ ಅವಧಿಯಲ್ಲಿ ಅವರು ಹತಾಶೆ, ಒತ್ತಡಗಳಿಗೆ ಒಳಗಾಗದೆ ತಮ್ಮಿಷ್ಟದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಸಿಗಬೇಕು. ಇದು ಸಾಧ್ಯವಾಗಬೇಕಾದರೆ ನಿರುದ್ಯೋಗದಿಂದ ಎದುರಾಗುವ ಆರ್ಥಿಕ ಸಮಸ್ಯೆಗಳು ಅವರನ್ನು ಬಾಧಿಸದಂತೆ ತಡೆಯಬೇಕು. ಈ ಕಾರಣಕ್ಕಾಗಿ ನಾವು ಪದವೀಧರ ಮತ್ತು ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆಗೆ ಸರ್ಕಾರ ಜಾರಿಗೆ ಬಂದ ನಂತರದ ಮೊದಲ ಸಂಪುಟ ಸಭೆಯಲ್ಲಿಯೇ ಆಡಳಿತಾತ್ಮಕ ಅನುಮೋದನೆ ನೀಡಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಯೋಜನೆ ಜನವರಿಯಿಂದ ಜಾರಿಗೆ ಬರಲಿದ್ದು, ಸುಮಾರು ನಾಲ್ಕೂವರೆ ಲಕ್ಷ ಯುವಜನತೆಗೆ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ.
ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.
ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.

Siddaramaiah ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.
ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,
ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.
ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...