Indian National Congress ಸರ್ಕಾರ 6 ತಿಂಗಳು ಪೂರೈಸಿದ ಬೆನ್ನಲ್ಲೇ, ಬಹುನಿರೀಕ್ಷಿತ ನಿಗಮ ಮಂಡಳಿಗಳ ಅಧ್ಯಕ್ಷರ
ನೇಮಕ ಪ್ರಕ್ರಿಯೆಯನ್ನು ಕಾಂಗ್ರೆಸ್ ಕೈಗೆತ್ತಿಕೊಳ್ಳಲಿದೆ.
ಮೊದಲ ಸುತ್ತಿನಲ್ಲಿ 25ಕ್ಕೂ ಹೆಚ್ಚು ಶಾಸಕರು ಹಾಗೂ 20 ಪ್ರಮುಖರ ಹೆಸರನ್ನು ಅಂತಿಮಗೊಳಿಸಲಾಗಿದೆ. ಬೆಳಗಾವಿ ಅಧಿವೇಶನಕ್ಕೆ ಮುನ್ನವೇ ಈ ನಾಮನಿರ್ದೇಶನ ಪ್ರಕ್ರಿಯೆ ಮುಗಿಯುವುದು ಬಹುತೇಕ ಖಚಿತವಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರು ನಗರಕ್ಕೆ ಆಗಮಿಸಿ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.
ಎಐಸಿಸಿ ಹೈಕಮಾಂಡ್ ಅನುಮೋದನೆ ನಂತರ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಅಧಿವೇಶನದ ಹಿನ್ನೆಲೆಯಲ್ಲಿ ಪಕ್ಷದ ಶಾಸಕರನ್ನು ಸಮಾಧಾನಪಡಿಸಿ ವಿಶ್ವಾಸದೊಂದಿಗೆ ಒಟ್ಟಿಗೆ ಕರೆದೊ ಯ್ಯಲು ಹಾಗೂ ಕಾರ್ಯಕರ್ತರನ್ನು ಚುನಾವಣೆ ಕೆಲಸಕ್ಕೆ ಅಣಿಗೊಳಿಸಲು ತುರ್ತಾಗಿ ಈ ನಾಮ ನಿರ್ದೇಶನದ ಮೂಲಕ ಅಧಿಕಾರ ಮತ್ತು ಸ್ಥಾನಮಾನ ಹಂಚಿಕೆ ಅಗತ್ಯ ಎಂಬ ತೀರ್ಮಾನಕ್ಕೆ ಬರಲಾಯಿತು.
Indian National Congress ನ.28ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಯುವ ನಿರೀಕ್ಷೆಯಿದೆ.