Kanakadasa Jayanthi ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುರುಬರ ಸಂಘ, ಶಿವಮೊಗ್ಗ ಇವರುಗಳು ಸಂಯುಕ್ತಾಶ್ರಯದಲ್ಲಿ ನ.30 ರಂದು ಬೆಳಗ್ಗೆ 11ಕ್ಕೆ ನಗರದ ಕುವೆಂಪು ರಂಗಮoದಿರದಲ್ಲಿ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರು ನೆರವೇರಿಸಲಿದ್ದಾರೆ. ಶಾಸಕರ ಎಸ್.ಎನ್. ಚನ್ನಬಸಪ್ಪರವರು ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಖೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಮತ್ತು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಶಾಸಕರು ಹಾಗೂ ವಿಧಾನ ಪರಿಷತ್ ಶಾಸಕರು, ಶಿವಮೊಗ್ಗ ಮಹಾನಗರ ಪಾಲಿಕೆ ಮಹಾಪೌರರು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಗಳು, ಶಿವಮೊಗ್ಗ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗು ಸದಸ್ಯರುಗಳು ಭಾಗವಹಿಸಲಿದ್ದಾರೆ.
Kanakadasa Jayanthi ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ. ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್, ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಇವರುಗಳು ಉಪಸ್ಥಿತರಿರಲಿದ್ದಾರೆ.