Friday, November 22, 2024
Friday, November 22, 2024

Karnataka Working Journalists Association ಪತ್ರಿಕಾ ವಿತರಕರಿಗೆ ಅಪಘಾತ ಸಂಬಂಧಿತ ಪರಿಹಾರ ನಿರ್ಧರಿಸಿ ಕಾರ್ಮಿಕ ಇಲಾಖೆ ಆದೇಶ

Date:

Karnataka Working Journalists Association ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿರುವ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ನೆರವು ನೀಡಲು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ ನೆರವು ಕೊಡಲು ಕ್ರಮಕೈಗೊಂಡಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಆದೇಶವನ್ನು ಕಾರ್ಮಿಕ ಇಲಾಖೆ ಹೊರಡಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರನ್ನು ಭೇಟಿ ಮಾಡಿ‌ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದೆ.

ಪತ್ರಿಕಾ ವಿತರಕರು ಕಾರ್ಮಿಕರಾಗಿದ್ದು, ಅವರಿಗೆ ಕನಿಷ್ಠ ಸೌಲಭ್ಯ ಒದಗಿಸುವಂತೆ ತುಮಕೂರು ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಒತ್ತಾಯಿಸಲಾಗಿತ್ತು. ಅಂದು ಪ್ರಭಾಕರ್ ಅವರು ಸಭೆಯಲ್ಲಿ ನೀಡಿದ ಭರವಸೆ ಶೀಘ್ರವಾಗಿ ಈಡೇರಿರುವುದು
ಬಹಳ ವರ್ಷಗಳ ಕನಸು ನನಸಾಗಿದೆ.

ಪತ್ರಿಕಾ ವಿತರಕರ ಬೇಡಿಕೆ ಈಡೇರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮತ್ತು ಎಲ್ಲಾ ಹಂತದಲ್ಲಿಯೂ ಜೊತೆಯಾಗಿ ಸಹಕಾರ ನೀಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಕರ್ನಾಟಕ ಪತ್ರಿಕಾ ವಿತರಕರ ಒಕ್ಕೂಟ ಅಭಿನಂದನೆಗಳನ್ನು ಸಲ್ಲಿಸಿ ಅವರ ಸೇವೆ ಸ್ಮರಿಸಿದೆ.

ಹೋರಾಟದ ಮೊದಲ ಹೆಜ್ಜೆ…

Karnataka Working Journalists Association ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ದಿನಾಂಕ 2.7.2022 ರಂದು ಬೆಳಿಗ್ಗೆ ಸೈಕಲ್ ನಲ್ಲಿ ಪತ್ರಿಕೆ ಹಂಚುತ್ತಿದ್ದಾಗ ಸಾರಿಗೆ ಸಂಸ್ಥೆ
ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ವಿತರಕ
ಗಣೇಶ್ ಮೃತಪಟ್ಟಿದ್ದ. ಈ ಕುಟುಂಬಕ್ಕೆ ಪರಿಹಾರ ಕೊಡಿಸಲು ಆಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಅವಿರತ ಹೋರಾಟ ಮಾಡಿದ ಪರಿಣಾಮವಾಗಿ ಕಾರ್ಮಿಕ ಇಲಾಖೆಯಿಂದ ಮೊಟ್ಟ ಮೊದಲ ಬಾರಿಗೆ 2 ಲಕ್ಷ ರೂ ಪರಿಹಾರವನ್ನು ಗಣೇಶ್ ಕುಟುಂಬಕ್ಕೆ ಕೊಡಿಸಲು ಸಾಧ್ಯವಾಗಿತ್ತು. ಈ ಪ್ರಕರಣ ಮಹತ್ವದ ಮತ್ತು ಭರವಸೆಯ ಮೆಟ್ಟಿಲಾಯಿತು ಎಂದು ಕರ್ನಾಟಕ ರಾಜ್ಯ ಪತ್ರಕರ್ತರ ಸಂಘ ಅಧ್ಯಕ್ಷರಾದ ಶಿವನಂದ ತಗಡೂರು ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ಅವರು ಇವರುಗಳಿಗೆ ಅಭಿನಂದನೆಗಳು ಸಲ್ಲಿಸಿದರು ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಎನ್. ಮಾಲತೇಶ್ ಪ್ರಧಾನ ಕಾರ್ಯದರ್ಶಿ ಮುಕ್ತರ್ ಅಹಮದ್ ( ನಜೀರ್ ) ರಾಮು ಜಿ. ಹರ್ಷ. ಭದ್ರಾವತಿ ಪರಶುರಾಮ್ ರಾವ್ ತೀರ್ಥಹಳ್ಳಿ ನಾಗಭೂಷಣ್.ಶಿಕಾರಿಪುರ ಗಜೇಂದ್ರ. ಹುಲಿಗಿ ಕೃಷ್ಣ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...