Constitution Day ಸಂವಿಧಾನ ದಿನಾಚರಣೆಯ ಪ್ರಯುಕ್ತ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯ ಡಾ. ಬಿ.ಆರ್.ಅಂಬೇಡ್ಕರ್‌ರವರ ಪ್ರತಿಮೆಗೆ ದಸಂಸ ಮುಖಂಡರುಗಳು ಭಾನುವಾರ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಜಗತ್ತಿನಲ್ಲಿಯೇ ಅತಿದೊಡ್ಡ ಸಂವಿಧಾನ ಎಂದು ಕರೆಸಿಕೊಳ್ಳುವ ನಮ್ಮ ಭಾರತದ ಸಂವಿಧಾನವನ್ನು ಗೌರವಿಸಿ ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸoವಿಧಾನವು ದೇಶದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಅದು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳನ್ನು ಸರಕಾರದ ಮೂರು ಮುಖ್ಯ ಅಂಗಗಳಾಗಿ ಏರ್ಪಡಿ ಸುತ್ತದೆ. ಸಂವಿಧಾನವು ಪ್ರತಿ ಅಂಗದ ಅಧಿಕಾರದ ವ್ಯಾಖ್ಯೆಯನ್ನು ನೀಡುವುದಲ್ಲದೆ ಅವುಗಳ ಜವಾಬ್ದಾರಿಯನ್ನೂ ಖಚಿತಗೊಳಿಸುತ್ತದೆ ಎಂದರು.
1949 ರಲ್ಲಿ ಈ ದಿನದಂದು ಭಾರತದ ಸಂವಿಧಾನವನ್ನು ಅಂಗೀಕರಿಸಲಾಯಿತು. ನ.26 ಜನವರಿ 1950 ರಂದು ಜಾರಿಗೆ ಬಂದಿತು. ಆದ್ದರಿಂದ ಇದು ಹೊಸ ಯುಗದ ಉದಯವನ್ನು ಗುರುತಿಸುತ್ತದೆ. ಸಂವಿಧಾನ ರಚನಾಕಾರರ ಕೊಡುಗೆಯನ್ನು ಅಂಗೀಕರಿಸಲು ಮತ್ತು ಪ್ರಮುಖ ಮೌಲ್ಯಗಳ ಬಗ್ಗೆ ಜನರನ್ನು ಉಲ್ಬಣಗೊಳಿಸಲು, ನವೆಂಬರ್ 26 ಅನ್ನು ‘ಸಂವಿಧಾನ ದಿನ’ ಎಂದು ಆಚರಿಸಲಾಗುತ್ತದೆ ಎಂದರು.
Constitution Day ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಹರೀಶ್, ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಕೆಪಿಸಿಸಿ ಸಂಯೋಜಕ ಹಿರೇಮಗಳೂರು ರಾಮಚಂದ್ರ, ಮುಖಂಡರುಗಳಾದ ನಚಿಜುಂಡಪ್ಪ, ಗಂಗಾಧರ್, ಮತ್ತಾವರ ಮಹೇಶ್, ನಿವೃತ್ತ ಅಧಿಕಾರಿ ಚಂದ್ರಪ್ಪ, ಸಮಾಜ ಕಲ್ಯಾಣಾಧಿಕಾರಿ ರೇವಣ್ಣ ಮತ್ತಿತರರು ಹಾಜರಿದ್ದರು.