Animal Husbandry & Veterinary Services ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಪಶು ಸಾಕಾಣಿಕೆಯಲ್ಲಿ ತೊಡಗಿರುವ ಜಿಲ್ಲೆಯ ರೈತರಿಗೆ ಉಚಿತವಾಗಿ ವಿವಿಧ ಮೇವಿನ ಬೀಜದ ಮಿನಿಕಿಟ್‌ಗಳನ್ನು ವಿತರಿಸಲಾಗುತ್ತಿದೆ. ರೈತರು ತಮ್ಮ ಆಧಾರ್ ಕಾರ್ಡ್, ಫ್ರೂಟ್ಸ್ ಗುರುತಿನ ಚೀಟಿ, ಜಮೀನಿನ ಪಹಣೆ ಪ್ರತಿ ಮತ್ತು ನೀರಾವರಿ ಜಮೀನನ್ನು ಹೊಂದಿರುವ ಆಸಕ್ತರು ತಮ್ಮ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ ಮೇವಿನ ಬೀಜದ ಮಿನಿಕಿಟ್‌ಗಳನ್ನು ಪಡೆದು ಪಶುಗಳಿಗೆ ಮೇವಿನ ಕೊರತೆಯಾಗದಂತೆ ಮೇವನ್ನು ಬೆಳೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Animal Husbandry & Veterinary Services ರೈತರು ತಮ್ಮ ಬಳಿ ಇರುವ ಜಾನುವಾರುಗಳಿಗೆ ಬೇಕಾದ ಮೇವಿನ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲಭ್ಯತೆ ಇದ್ದಲ್ಲಿ ತಮ್ಮ ತಮ್ಮ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಹೆಚ್ಚಿನ ಮೇವಿನ ಪ್ರಮಾಣ, ದರ, ತಮ್ಮ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ನೊಂದಾಯಿಸಿಕೊಳ್ಳುವoತೆ ಇಲಾಖೆಯು ಪ್ರಕಟಣೆಯಲ್ಲಿ ಕೋರಿದೆ.