Friday, November 22, 2024
Friday, November 22, 2024

Siddaramaiah ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಬಗ್ಗೆ ಕಾನೂನು ರೀತ್ಯ ಸೂಕ್ತ ಕ್ರಮ- ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಆಲಿಸಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.

ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ.
ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಜನಸ್ಪಂದನೆ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರು. ಸುಮಾರು 3500 ಮನವಿಗಳು ಸ್ವೀಕೃತವಾಗಿದೆ. ನಾನು ಬೆಳಿಗ್ಗೆಯಿಂದಲೇ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಖುದ್ದು ಆಲಿಸಿದ್ದೇನೆ. ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಬಗ್ಗೆ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇಂದಿನ ಜನಸ್ಪಂದನಕ್ಕೆ ಉದ್ಯೋಗ ಬೇಡಿಕೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದು, ಸಾಧ್ಯವಾದ ಕಡೆಗಳಲ್ಲಿ ಉದ್ಯೋಗ ಹಾಗೂ ಮಾಸಾಶನ ಒದಗಿಸಲು ಸೂಚನೆ ನೀಡಲಾಗಿದೆ. ಜಿಲ್ಲಾ ಮಂತ್ರಿಗಳು, ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಜನರ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಲಾಗಿದೆ. ಮೂರು ತಿಂಗಳ ನಂತರ ಮತ್ತೊಮ್ಮೆ ಜನಸ್ಪಂದನ ನಡೆಸಲಾಗುವುದು. ಆಗ ಈ ಪ್ರಮಾಣದಲ್ಲಿ ಜನರು ತಮ್ಮ ಸಮಸ್ಯೆಗಳೊಂದಿಗೆ ಬರದಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ನೋಡಿಕೊಳ್ಳಬೇಕು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ ಸಮಸ್ಯೆ ಸೇರಿದಂತೆ ಆರೋಗ್ಯ ಸಮಸ್ಯೆಯಿಂದಾಗಿ ವೈದ್ಯಕೀಯ ವೆಚ್ಚ ಭರಿಸುವ ಮನವಿಗಳು ಹೆಚ್ಚು ಸ್ವೀಕೃತವಾಗಿವೆ. ನಾನು ಮುಖ್ಯಮಂತ್ರಿಯಾದ ನಂತರ ಜನರ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತದೆ ಎಂಬ ನಂಬಿಕೆಯಿಂದ ಜನರು ಸರ್ಕಾರಿ ಆಸ್ಪತ್ರೆ ಬಿಟ್ಟು, ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುವ ಕಾರಣ, ಅವರ ವೈದ್ಯಕೀಯ ವೆಚ್ಚಗಳೂ ಹೆಚ್ಚಾಗುತ್ತವೆ. ಆ ವೆಚ್ಚದಲ್ಲಿ ಸಣ್ಣಪ್ರಮಾಣವನ್ನು ಸರ್ಕಾರ ಈ ರೀತಿ ಭರಿಸಲು ಪ್ರಯತ್ನಿಸುತ್ತದೆ.
ಮಕ್ಕಳ ಪೌಷ್ಟಿಕಾಂಶ ಸಮಸ್ಯೆಗಳ ಬಗ್ಗೆ ಇಂದು ಅಹವಾಲುಗಳ ಬಂದಿವೆ, ಮಕ್ಕಳ ಪೌಷ್ಠಿಕಾಂಶ ವೃದ್ಧಿಸುವ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ 185 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಅನೀಮಿಯಾ ಇರುವ ಮಕ್ಕಳಿಗೆ ಔಷಧಿ, ಶಾಲಾಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಪ್ರತಿದಿನವು ಹಾಲು, ಬಿಸಿಯೂಟಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Siddaramaiah ಶಕ್ತಿ ಯೋಜನೆ ಅಭೂತಪೂರ್ವ ಯಶಸ್ವಿಯಾದರೂ, ಕೆಲವೆಡೆ ಬಸ್ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ 971 ಬಸ್ಸಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಅಗತ್ಯವಿರುವೆಡೆ ಹೆಚ್ಚು ಬಸ್ ಗಳನ್ನು ಹಾಕಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...