Thursday, March 19, 2026
Thursday, March 19, 2026

Bharat Scouts and Guides ಬೌದ್ಧಿಕ ತಿಳುವಳಿಕೆ ಜೊತೆ ಆತ್ಮವಿಶ್ವಾಸ ಬೆಳೆಸಲು ತರಬೇತಿ ಶಿಬಿರಗಳು ಸಹಕಾರಿ- ರಮೇಶ್ ಶಾಸ್ತ್ರಿ

Date:

Bharat Scouts and Guides ತರಬೇತಿ ಶಿಬಿರಗಳು ಬೌದ್ಧಿಕ ತಿಳವಳಿಕೆ ವೃದ್ಧಿಸುವ ಜತೆಯಲ್ಲಿ ಆತ್ಮವಿಶ್ವಾಸ ಮೂಡಿಸಲು ಸಹಕಾರಿ ಆಗುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕದ ಪ್ರಧಾನ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಅವರು ಹೇಳಿದರು.

ಹುಂಚದ ಅತಿಶಯ ಕ್ಷೇತ್ರ ಹೊಂಬುಜ ಶ್ರೀ ಪದ್ಮಾವತಿ ದೇವಸ್ಥಾನದ ಆವರಣದಲ್ಲಿ ಶಿಕ್ಷಕರಿಗೆ ಆಯೋಜಿಸಿದ್ದ ಸ್ಕೌಟ್ ಗೈಡ್, ಕಬ್, ಬುಲ್ ಗೈಡ್, ಕ್ಯಾಪ್ಟನ್, ಸ್ಕೌಟ್ ಮಾಸ್ಟರ್, ಬುಲ್, ಫ್ಲಾಕ್ ಲೀಡರ್ ಗಳಿಗೆ ಏಳು ದಿನಗಳ ಕಾಲ ಜಿಲ್ಲಾ ಮಟ್ಟದ ತರಬೇತಿ ಶಿಬಿರ ಸಮಾರೋಪದಲ್ಲಿ ಮಾತನಾಡಿದರು.

ತರಬೇತಿ ಪಡೆದಿರುವ ಶಿಕ್ಷಕರು ಶಾಲೆಗಳಲ್ಲಿ ಸ್ಕೌಟ್ ಮತ್ತು ಗೈಡ್ ಘಟಕವನ್ನು ಪರಿಣಾಮಕಾರಿ ಅನುಷ್ಠಾನ ಮಾಡಲು ಮುಂದಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ವದ ಕುರಿತು ಮಕ್ಕಳಿಗೆ ಅರಿವು ಮೂಡಿಸಬೇಕು. ಮುಂದಿನ ದಿನಗಳಲ್ಲಿ ಹೆಚ್ಚು ಘಟಕಗಳನ್ನು ಸ್ಥಾಪಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ ಆಯುಕ್ತ ಕೆ.ಪಿ.ಬಿಂದುಕುಮಾರ್ ಮಾತನಾಡಿ, ತರಬೇತಿ ಶಿಬಿರಗಳು ಯಶಸ್ವಿಯಾಗಲು ಶಿಕ್ಷಕರ ಪಾತ್ರ ಮಹತ್ತರವಾಗಿತ್ತು. ಇಲ್ಲಿ ಸಮಗ್ರ ಮಾಹಿತಿ ತಿಳಿದುಕೊಂಡಿರುವ ಎಲ್ಲ ಶಿಬಿರಾರ್ಥಿಗಳು ಸಮಾಜಮುಖಿಯಾಗಿ ಕೆಲಸ ಮಾಡುವ ದಿಸೆಯಲ್ಲಿ ಮುನ್ನಡೆಯಬೇಕು. ಮಕ್ಕಳು ಸಹ ಉತ್ತಮ ನಾಯಕರಾಗಿ ರೂಪುಗೊಳ್ಳುವಲ್ಲಿ ಸಹಕಾರಿ ಆಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಭಾರತಿ ಡಯಾಸ್ ಸರ್ವಧರ್ಮ ಪ್ರಾರ್ಥನೆ ನಡೆಸಿಕೊಟ್ಟರು. ಒಂದು ವಾರ ತರಬೇತಿ ಪಡೆದ ಶಿಕ್ಷಕರು ಅನಿಸಿಕೆ ಹಂಚಿಕೊಂಡರು. ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.

ಶಿಬಿರ ನಡೆಸಲು ಅವಕಾಶ ಮಾಡಿಕೊಟ್ಟ ಹೊಂಬುಜ ಜೈನಮಠದ ಶ್ರೀ ದೇವೆಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಜಿಲ್ಲಾ ಸಂಸ್ಥೆಯು ಅಭಿನಂದಿಸಿತು.

Bharat Scouts and Guides ಕೇಂದ್ರ ಸ್ಥಾನಿಕ ಆಯುಕ್ತ, ಶಿಬಿರದ ನಾಯಕ ಕೆ.ರವಿ, ಶಿವಶಂಕರ್, ತರಬೇತುದಾರರಾದ ಪರಮೇಶ್ವರಯ್ಯ, ಜಿ.ವಿಜಯ್‌ಕುಮಾರ್, ಸಂಧ್ಯಾರಾಣಿ, ರಾಧಿಕಾ, ಮುರಳಿ, ವಿನಯಭೂಷಣ್, ಮೀನಾಕ್ಷಮ್ಮ, ಪುಟ್ಟಪ್ಪ, ಗೀತಾ ಚಿಕಮಠ, ಸಿ.ಎಸ್.ಅಶೋಕ್‌ಕುಮಾರ್, ಹೇಮಲತಾ, ಪ್ರಹ್ಲಾದ್, ಕಾರ್ಯದರ್ಶಿ ಪರಮೇಶ್ವರ್, ವೈ.ಆರ್.ವಿರೇಶಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...