D. K. Shivakumar ವಿಧಾನಸೌಧದಲ್ಲಿ ಇಂದು 108 ಆರೋಗ್ಯ ಕವಚ ತುರ್ತು ಆಂಬ್ಯುಲೆನ್ಸ್ ಸೇವೆಗೆ ನೂತನ 262 ಆಂಬ್ಯುಲೆನ್ಸ್‌ಗಳನ್ನು ಉಪ ಮುಖ್ಯ ಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಿ ಮಾತನಾಡಿದರು.
D. K. Shivakumar ಕರ್ನಾಟಕ ರಾಜ್ಯ ಉತ್ತಮ ಆರೋಗ್ಯ ವ್ಯವಸ್ಥೆ ನೀಡುವಲ್ಲಿ ಹಾಗೂ ವೈದ್ಯರನ್ನು ರೂಪಿಸುವಲ್ಲಿ ದೇಶಕ್ಕೆ ಮಾದರಿಯಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹಳ್ಳಿಯಿಂದ ನಗರದವರಿಗೆ ಆಂಬ್ಯುಲೆನ್ಸ್ ಸೇವೆ ಲಭ್ಯವಾಗಬೇಕೇಂಬುದು ನಮ್ಮ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ
ಇಂದು ನೂತನ 262 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆಗೊಳಿಸಿದ್ದೇವೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕರೆಮಾಡಿದ 15 ರಿಂದ 20 ನಿಮಿಷದಲ್ಲಿ ಆಂಬುಲೆನ್ಸ್ ಸೇವೆ ಸಿಗಲಿದ್ದು,ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.