Friday, June 20, 2025
Friday, June 20, 2025

Aam Admi Party ಪೊಲೀಸ್ ಇಲಾಖೆ ಜನಸ್ನೇಹಿ ಬದಲು ಜನ ವಿರೋಧಿ ಆಡಳಿತ ನೀಡುವುದು ಸರಿಯಲ್ಲ- ಡಾ.ಕೆ.ಸುಂದರಗೌಡ

Date:

Aam Admi Party ಸಾರ್ವಜನಿಕರಿಗೆ ನ್ಯಾಯವನ್ನು ಒದಗಿಸುವ ಕಾರ್ಯದಲ್ಲಿ ನಿರಂತರಾ ಗಿರುವ ವಕೀಲರ ಮೇಲೆ ದೌರ್ಜನ್ಯವೆಸಗಿರುವ ಪೊಲೀಸ್ ಇಲಾಖೆ ಕ್ರಮವನ್ನು ಎಎಪಿ ಮಾಧ್ಯಮ ಪ್ರತಿನಿಧಿ ಡಾ|| ಕೆ.ಸುಂದರಗೌಡ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಪ್ರಸ್ತುತ ನ್ಯಾಯವಾದಿಗಳಿಗೆ ಪೊಲೀಸ್ ಇಲಾಖೆ ದೌರ್ಜನ್ಯವೆಸಗಿ ಮಾರಣಾಂತಿಕ ಹಲ್ಲೆಗೊಳಿಸಿದ್ದರೆ ಜನಸಾಮಾನ್ಯರನ್ನು ಯಾವ ರೀತಿಯಲ್ಲಿ ಉಪಚರಿಸಲಿದೆ ಎಂಬುದು ಅರಿಯಬೇಕಿದೆ ಎಂದು ಹೇಳಿದ್ದಾರೆ.

ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುವ ಬದಲು ಜನವಿರೋದಿ ಯಾಗಿ ಆಡಳಿತ ನೀಡುತ್ತಿರುವುದು ಸರಿಯಲ್ಲ. ಪೊಲೀಸ್ ಸಿಬ್ಬಂದಿಗಳು ಜನಪರ ಕಾಳಜಿ ಹೊಂದಿ ಕೆಲಸ ನಿರ್ವ ಹಿಸದೇ ವೈರತ್ವದಿಂದ ಮುನ್ನೆಡೆದರೆ ಏನನ್ನು ಸಾಧಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Aam Admi Party ಪೊಲೀಸ್ ಇಲಾಖೆ ಮಾನಸಿಕ ಹಾಗೂ ಶಾರೀರಿಕವಾಗಿ ದಂಡನೆ ನೀಡುವುದು ನಿಷೇಧಿಸಬೇಕು. ಇದೇ ರೀತಿ ದೌರ್ಜನ್ಯವನ್ನು ಪೊಲೀಸ್ ಅಧಿಕಾರಿಗಳು ಮುಂದುವರೆದರೆ ಅತಿರೇಖಕ್ಕೆ ಬೆಳೆದು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Health and Family Welfare Department ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

District Health and Family Welfare Department ಕರ್ನಾಟಕ ಮೆದುಳು ಆರೋಗ್ಯ...

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...