Monday, February 2, 2026
Monday, February 2, 2026

Mahatma Gandhi Narega Scheme ಲಕ್ಕಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಕಾಮಗಾರಿ ಕಳಪೆ

Date:

Mahatma Gandhi Narega Scheme ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಲಕ್ಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಜೆಸಿಬಿ ಯಂತ್ರ ಬಳಕೆಯಿಂದ ನಿರ್ವಹಿಸಿರುವ ಕಾಮಗಾರಿಗಳು ಸಂಪೂರ್ಣ ಕಳಪೆಯಾಗಿದೆ ಎಂದು ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಒಂಬಡ್ಸ್ಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಈ ವೇಳೆ ಮಾತನಾಡಿದ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ತಮ್ಮೇಗೌಡ ಲಕ್ಯಾ ಹೋಬಳಿಯ ಲಕ್ಕಮನಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಜೆಸಿಬಿ ಯಂತ್ರ ಬಳಸಿ ನಿರ್ವಹಿಸಿರುವ ಪರಿಣಾಮ ಸಂಪೂರ್ಣ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದ್ದಾರೆ.

ಲಕ್ಕಮ್ಮನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಬೀರನಹಳ್ಳಿ ಗ್ರಾಮದ ಕೆಜಿ ಹಟ್ಟಿ ನಾಗನಕಟ್ಟೆ ಹನುಮಂತೇಗೌಡರ ಜಮೀನಿಂದ ಸಂತೆ ಮರದ ಹಳ್ಳದವರೆಗೆ, ಸಿರಬಡಿಗೆ ಗ್ರಾಮದ ಗುಂಡಿಯಿಂದ ಕಾಲೋನಿವರೆಗೆ, ಕುಬೇರನ ಜಮೀ ನಿಂದ ಕೋಳಿ ಫಾರಂವರೆಗೆ ಮತ್ತು ಭಾಸ್ಕರನ ಕಟ್ಟೆಯಿಂದ ರಾಮೇಗೌಡರ ಜಮೀನಿವರೆಗೆ ರಸ್ತೆ ಅಭಿವೃದ್ದಿಗೆ ಸರ್ಕಾರ ಲಕ್ಷಾಂತರ ರೂ. ವ್ಯಯಿಸಿದ್ದು ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ದೂರಿದ್ದಾರೆ.

Mahatma Gandhi Narega Scheme ಚಿಕ್ಕಮಗಳೂರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಕೂಲಿಕಾರ್ಮಿಕರ ಕೆಲಸವನ್ನು ಕೂಡಾ ಜೆಸಿಬಿ ಯಂತ್ರ ಬಳಸಿ ಕಾಮಗಾರಿ ನಿರ್ವಹಿಸಲಾಗಿದೆ. ಜೊತೆಗೆ ಅಕ್ರಮವಾಗಿ ಕೂಲಿಕಾರರ ಜಾಬ್‌ಕಾರ್ಡ್ ಹೆಸರಿನಲ್ಲಿ ವಸೂಲಿಗೆ ಮುಂ ದಾಗಿದ್ದು ಇದೀಗ ಅವರ ಖಾತೆಗೆ ಹಣವನ್ನು ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲನೆ ಗ್ರಾಮಸ್ಥರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...