Saturday, May 16, 2026
Saturday, May 16, 2026

Gram Panchayat ಉತ್ತಮ ರಸ್ತೆ ನಿರ್ಮಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಿ- ನಯನ ಮೋಟಮ್ಮ

Date:

Gram Panchayat ರಸ್ತೆ ಡಾಂಬರೀಕರಣದಲ್ಲಿ ಗುಣಮಟ್ಟತೆ ಕಾಪಾಡಿಕೊಂಡು ಉತ್ತಮ ರಸ್ತೆ ನಿರ್ಮಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಗುತ್ತಿಗೆ ದಾರರಿಗೆ ಸೂಚನೆ ನೀಡಿದರು.

ಚಿಕ್ಕಮಗಳೂರು ತಾಲ್ಲೂಕಿನ ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಡ್ಡೇನಹಳ್ಳಿ ಗ್ರಾಮಕ್ಕೆ 20 ಲಕ್ಷ ರೂ. ವೆಚ್ಚದ ರಸ್ತೆ ಡಾಂ ಬರೀಕರಣ ಕಾಮಗಾರಿಗೆ ಶನಿವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಅಂಬಳೆ ಹೋಬಳಿಯ ಹೊಸಕೋಟೆ, ಕುರುಬರಹಳ್ಳಿ, ಜಡಗನಹಳ್ಳಿ ಹಾಗೂ ಗಿಡ್ಡೇನಹಳ್ಳಿ ಗ್ರಾಮಗಳ ರಸ್ತೆ ಡಾಂಬರೀಕರಣಕ್ಕೆ ಈಗಾಗಲೇ 1.35ಕೋಟಿ ರೂ. ಅನುದಾನ ಮೀಸಲಿರಿಸಿದ್ದು ಗುತ್ತಿಗೆದಾರರು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಂಡು ಗ್ರಾಮಸ್ಥರಿಗೆ ಸಮರ್ಪಕ ರಸ್ತೆ ನಿರ್ಮಿಸಿಕೊಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದಾಗಿನಿಂದ ಹಲವಾರು ಜನಪರ ಯೋಜನೆಗಳನ್ನು ರೂಪಿಸಿದೆ. ಮುಖ್ಯಮಂತ್ರಿಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶದ ರೈತರಿಗೆ ಒತ್ತು ನೀಡುತ್ತಿದ್ದಾರೆ. ಜೊತೆಗೆ ಗ್ರಾಮಗಳ ಇತರೆ ಸವಲತ್ತುಗಳನ್ನು ಒದಗಿಸುವ ಮೂಲಕ ಪ್ರಾಮಾಣ ಕ ಕೆಲಸ ಮಾಡಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ರಸ್ತೆ ಕಾಮಗಾರಿ ಸಂಬಂಧ ಹಂತ ಹಂತವಾಗಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದ ಅವರು ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವ ಜೊತೆಗೆ ಗ್ರಾಮಸ್ಥರ ಸಹಕಾರ ಮೂ ಲಕ ಡಾಂಬರೀಕರಣ ಪೂರ್ಣಗೊಳಿಸಬೇಕು ಎಂದು ಹೇಳಿದರು.

Gram Panchayat ಈಗಾಗಲೇ ಹೊಸಕೋಟೆ ರಸ್ತೆಗೆ 70 ಲಕ್ಷ, ಕುರುಬರಹಳ್ಳಿ ರಸ್ತೆಗೆ 25 ಲಕ್ಷ, ಜಡಗನಹಳ್ಳಿ ರಸ್ತೆಗೆ 20 ಲಕ್ಷ ಹಾಗೂ ಮುಗುಳುವಳ್ಳಿಯಿಂದ ಗಿಡ್ಡೇನಹಳ್ಳಿ ರಸ್ತೆಗೆ 20 ಲಕ್ಷ ಸೇರಿದಂತೆ ಒಟ್ಟು 1.35ಕೋಟಿ ಅನುದಾನವನ್ನು ಸರ್ಕಾರ ಮೀಸರಿಸಲಾಗಿದೆ ಎಂದು ತಿಳಿಸಿದರು.

ಜಿ.ಪಂ. ಮಾಜಿ ಸದಸ್ಯ ಕೆ.ವಿ.ಮಂಜುನಾಥ್ ಮಾತನಾಡಿ ಹರಿಹರದಹಳ್ಳಿ, ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಿಗೆ ಸಮುದಾಯ ಭವನ ನಿರ್ಮಾಣ ಹಾಗೂ ಮರ್ಲೆಯಿಂದ ಲಕ್ಯಾವರೆಗೆ ರಸ್ತೆ ಅಭಿವೃದ್ದಿಗೊಳಿಸುವ ಸಂಬಂಧ ಶಾಸಕರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹರಿಹರದಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಶಾರದಾ ಮಾಸ್ತೇಗೌಡ, ಕಾಂಗ್ರೆಸ್ ಅಂಬಳೆ ಹೋಬಳಿ ಅಧ್ಯಕ್ಷ ವಿಜಯ್‌ಕುಮಾರ್, ಮರ್ಲೆ ಗ್ರಾ.ಪಂ. ಸದಸ್ಯ ರಾಜೇಗೌಡ, ಸೇವಾದಳ ಅಧ್ಯಕ್ಷ ಬಸವ ರಾಜ್, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಓಂಪ್ರಕಾಶ್, ಕೆ.ವಿ.ವಿರೂಪಾಕ್ಷ, ಕೆಂಚೇಗೌಡ, ಕೆ.ಎಸ್.ಪ್ರಕಾಶ್, ಮುಖಂಡರುಗಳಾದ ವಿಜಯ್‌ಕುಮಾರ್, ಪುಟ್ಟೇಗೌಡ, ಮುಳ್ಳೇಗೌಡ, ಲಕ್ಷ್ಮಣಗೌಡ, ಚಿಕ್ಕೇಗೌಡ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...