Friday, December 5, 2025
Friday, December 5, 2025

CM Siddharamaih ಕರ್ನಾಟಕದಲ್ಲಿ ಗ್ಯಾರಂಟಿ ನುಡಿದಂತೆ ನಡದೆವು, ತೆಲಂಗಾಣದ ಮತದಾರ ಕಾಂಗ್ರೆಸ್ ಗೆ ಒಲಿದ-ಸಿದ್ಧರಾಮಯ್ಯ

Date:

CM Siddharamaih ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ.
ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ ಎಂದು ತಿಳಿಸಿದ್ದಾರೆ.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ.

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು ಎಂದಿದ್ದಾರೆ.

ಬಿಜೆಪಿ ಬಿಆರ್‌ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ ಎಂದರು.

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ.
ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ‌
ರಾಜಸ್ತಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು‌ ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದಿದ್ದಾರೆ.

CM Siddharamaih ರಾಜಸ್ತಾನ ಮತ್ತು ಚತ್ತೀಸ್ ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...